
ಬೃಹತ್ ಪ್ರತಿಭಟನೆ
ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಜನವಿರೋಧಿ ನೀತಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಬೆಂಗಳೂರು ನಗರದಲ್ಲಿ ಗುಂಡಿಗಳನ್ನು ಮುಚ್ಚದೆ ರಸ್ತೆ ಅಪಘಾತಗಳಿಗೆ ಕಾರಣವಾದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುವ ಮುಖಂಡರು ಹಾಗೂ ರಾಜ್ಯ ಯುವ ಜನತಾದಳದ ಅಧ್ಯಕ್ಷರಾದ ಶ್ರೀ ನಿಖಿಲ್ ಕುಮಾರ್ ಸ್ವಾಮಿ ರವರು ಹಾಗೂ ಕರ್ನಾಟಕ ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು. ಸಿ.ಬಿ. ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ: 03-03-2025 ಸೋಮವಾರ
ಸಮಯ: ಬೆಳಗ್ಗೆ 10:00 ಗಂಟೆಗೆ
ಸ್ಥಳ: ಫ್ರೀಡಂ ಪಾರ್ಕ್, ಬೆಂಗಳೂರು
ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ಮಹಿಳಾ ವಿಭಾಗದ ಅಧ್ಯಕ್ಷರು ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಬಿಬಿಎಂಪಿ ಮಾಜಿ ಸದಸ್ಯರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಮಯಕ್ಕೆ ಸರಿಯಾಗಿ ಆಗಮಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.
ಇಂತಿ
ಹೆಚ್.ಎಂ. ರಮೇಶ್ ಗೌಡ
ಮಾಜಿ ಶಾಸಕರು ಹಾಗೂ ಅಧ್ಯಕ್ಷರು, ಬೆಂಗಳೂರ


