BIG NEWS: ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು-ಬಿಮ್ಸ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು-ಬಿಮ್ಸ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ ಹನುಮಂತರಾವ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಿಮ್ಸ್ ನಿರ್ದೇಶಕ ಡಾ.ಅಶೋಕ್ ಶೆಟ್ಟಿ ಅವರ ಚೇಂಬರ್ ನಲ್ಲಿ ದಾಖಲೆ ಪರಿಸೀಲನೆ ನಡೆಸಿದ್ದಾರೆ.
ಬಿಮ್ಸ್ ನಲ್ಲಿ ಔಷಧಿ ಖರೀದಿಯಲ್ಲಿ ಅವ್ಯವಹಾರ, ವೈದ್ಯರಿಂದ ಕರ್ತವ್ಯ ಲೋಪ ಆರೋಪ, ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಸರಕಾರದ ನಿರ್ದೇಶನದಂತೆ ಬೆಳಗಾವಿ ಬಿಮ್ಸ್ ನಲ್ಲಿನ ಸಮಸ್ಯೆ, ವೈದ್ಯಕೀಯ ವಿದ್ಯಾರ್ಥಿಗಳ ವಸತಿ ವ್ಯವಸ್ಥೆಯನ್ನು ಇನ್ನುಳಿದ ಸಮಸ್ಯೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕಾಯುಕ್ತರು ಜಿಲ್ಲಾಸ್ಪತ್ರೆಯ ಎಲ್ಲ ವಿಭಾಗಗಳಿಗೂ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಇದು ಅವರ ಸಾಮಾನ್ಯ ಭೇಟಿಯಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭದ ನ್ಯೂನತೆಗಳು ಏನು, ಬಾಣಂತಿಯರ ಸಾವಿನ ಕಾರಣವೇನು ಇಂಬಿತ್ಯಾದಿ ಮಾಹಿತಿಗಳನ್ನು ಪಡೆದಿದ್ದಾರೆ. ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಆರಂಭಸಬೇಕೆಂಬುದು ಜನರ ಬಹುದಿನಗಳ ಬೇಡಿಕೆಯಾಗಿದೆ. ಆದರೇ. ಮಾನವ ಸಂಪನ್ಮೂಲದ ಕೊರತೆಯಿಂದಾಗಿ ವಿಳಂಬವಾಗುತ್ತಿದೆ. ಈಗಾಗಲೇ ಕೆಲ ವಿಭಾಗಗಳು ಕಾರ್ಯರತವಾಗಿವೆ ಎಂದು ಬಿಮ್ಸ್ ನಿರ್ದೇಶಕ ಡಾ.ಅಶೋಕ್ ಕುಮಾರ್ ಶೆಟ್ಟಿ ಹೆಚ್ಚಿನ ಮಾಹಿತಿಯನ್ನು ನೀಡಿದರು.


