Breaking News
BIG NEWS : BPL ಪಡಿತರ ಚೀಟಿದಾರರಿಗೆ’ ಬಿಗ್ ಶಾಕ್.!

ಬೆಂಗಳೂರು: ರಾಜ್ಯ ಸರ್ಕಾರದಿಂದ ಅನರ್ಹರ ರೇಷನ್ ಕಾರ್ಡ್ ಈಗಾಗಲೇ ಒಂದಷ್ಟು ರದ್ದುಗೊಳಿಸಲಾಗಿದೆ. ಈಗ ಮುಂದುವರೆದು ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಹಚ್ಚೋದಕ್ಕೆ ಸಮಿತಿ ರಚನೆ ಮಾಡಿದೆ.
ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.


