Local News

ಬೆಳಗಾವಿಯಲ್ಲಿ ಭೀಕರ ಅಪಘಾತ ಹೆದ್ದಾರಿಯಲ್ಲಿ ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ: ಇಬ್ಬರು ಪ್ರಯಾಣಿಕರ ರಕ್ಷಣೆ.!

ಬೆಳಗಾವಿ:  ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದಿರುವ ಘಟನೆ ನಡೆದಿದೆ.

ಬೆಳಗಾವಿಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ  ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ ಎಂಬ ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವೇಗವಾಗಿ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರು ನಜ್ಜು ಗುಜ್ಜಾಗಿದ್ದು, ಅದೃಷ್ಟವಶಾತ್ ವ್ಯಾಗನರ್ ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ವಿವರ : ರಸ್ತೆ ಪಕ್ಕದಲ್ಲಿ ಸಂಚರಿಸುತ್ತಿದ್ದ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಉರುಳಿಬಿದ್ದಿದೆ.  ಈ ಅಪಘಾತ ನಡೆದರೂ  ಕಾರ್‌ನಲ್ಲಿದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ.

ಕಾರಿನಲ್ಲಿ ಇದ್ದವರನ್ನು ರಕ್ಷಿಸಲು ದೊಡ್ಡ ಮಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಪ್ರಯಾಣಿಕರು ಪಾರಾದ ರೀತಿಗೇ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಶೋಕ್‌ ಲೇಲ್ಯಾಂಡ್‌ ಕಂಪನಿಯ ಕಾಂಕ್ರಿಟ್‌ ಲಾರಿ ಬಿದ್ದ ರಭಸಕ್ಕೆ ಇಡೀ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಕಾರ್‌ನ ಒಳಗಡೆಯ ಇಬ್ಬರು ಪ್ರಯಾಣಿಕರಿದ್ದರು. ಘಟನೆ ನಡೆದ ಬೆನ್ನಲ್ಲಿಯೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಿದ್ದರು. ಲಾರಿಯನ್ನು ಮೊದಲಿಗೆ ಕ್ರೇನ್‌ ಮೂಲಕ ಮೇಲೆತ್ತಲಾಗಿದೆ. ಅನಂತರ ಲಾರಿ ಅಡಿಯಲ್ಲಿದ್ದ ಕಾರನ್ನು ಸಾರ್ವಜನಿಕರು ಹೊರಗೆ ತೆಗೆದಿದ್ದಾರೆ. ಇಬ್ಬರನ್ನೂ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button