State
ಬೆಳಗಾವಿ: ಮೇಯರ್ ಆಗಿ ಮಂಗೇಶ ಪವಾರ್, ಉಪಮೇಯರ್ ವಾಣಿ ಜೋಶಿ ಆಯ್ಕೆ

ಬೆಳಗಾವಿ: ತೀವ್ರ ಕುತೂಹಲ ನಡುವೆ ಇಲ್ಲಿನ ಮಹಾನಗರ ಪಾಲಿಕೆಯ 23 ನೇ ಅವಧಿಯ ನೂತನ ಮೇಯರ್ ಆಗಿ ಮಂಗೇಶ ಪವಾರ್ ಮತ್ತು ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ನಡೆದ ಮಹಾನಗರ ಪಾಲಿಕೆಯ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ ಪಕ್ಷದಲ್ಲಿ ಚಟುವಟಿಕೆಗಳು ತೀವ್ರಗೊಂಡಿದ್ದು, ಗದ್ದುಗೆ ಏರಲು ಪ್ರತಿಪಕ್ಷವೂ ತಮ್ಮದೇ ತಂತ್ರ ರೂಪಿಸುತ್ತಿರುವುದರಿಂದ ಚುನಾವಣೆ ಕುತೂಹಲ ಮೂಡಿಸಿತ್ತು. ಕೊನೆಯಲ್ಲಿ ನೂತನ ಮೇಯರ್ ಆಗಿ ಮಂಗೇಶ ಪವಾರ್ ಮತ್ತು ಉಪಮೇಯರ್ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಅವಿರೋಧವಾಗಿ ಆಯ್ಕೆಯಾದರು.
ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ. ಹಾಗೂ ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ ಬೆನಕೆ ಹಾಗೂ ಬಿಜೆಪಿ ಮುಖಂಡರು ಹಾಗೂ ಇತರರು ಇದ್ದರು.



