State
Trending

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ: ಈ ವಿಶೇಷ ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ.

ಈ ವಿಶೇಷ ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06511/06512 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು: ರೈಲು ಸಂಖ್ಯೆ 06511 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 28, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 07:30ಕ್ಕೆ ಬೆಳಗಾವಿಯನ್ನು ತಲುಪಲಿದೆ.
ರೈಲು ಸಂಖ್ಯೆ 06512 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 29, 2025 ರಂದು ಸಂಜೆ 5:00 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 04:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 06513/06514 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು: ರೈಲು ಸಂಖ್ಯೆ 06513 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 30, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 07:30ಕ್ಕೆ ಬೆಳಗಾವಿಯನ್ನು ತಲುಪಲಿದೆ.
ರೈಲು ಸಂಖ್ಯೆ 06514 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 31, 2025 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 04:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ನಿಲುಗಡೆ: 

ಈ ವಿಶೇಷ ರೈಲುಗಳು (06511/12 ಮತ್ತು 06513/14) ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.

ಬೋಗಿಗಳ ಸಂಯೋಜನೆ: ಈ ರೈಲುಗಳಲ್ಲಿ 1-ಫಸ್ಟ್ ಎಸಿ ಕೋಚ್, 2-ಎಸಿ ಟು ಟೈರ್ ಬೋಗಿಗಳು, 5-ಎಸಿ ತ್ರಿ ಟೈರ್ ಬೋಗಿಗಳು, 8-ಸ್ಲೀಪರ್ ಕ್ಲಾಸ್ ಬೋಗಿಗಳು, 4-ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು ಎಸ್ಎಲ್ಆರ್ / ಡಿ ಬೋಗಿಗಳು ಇರಲಿವೆ.
ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್ ಗಳನ್ನು ಸಂಪರ್ಕಿಸಬಹುದು ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಣೆ ತಿಳಿಸಿದೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button