
Aadhaar Card: ಪ್ರಮುಖ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಕೂಡ ಒಂದಾಗಿದೆ. ಯಾವುದೇ ಅರ್ಜಿ ಸಲ್ಲಿಸಲು ಇದು ಅತ್ಯಗತ್ಯವಾಗಿ ಬೇಕೆ ಬೇಕಾಗುತ್ತದೆ. ಇದೀಗ 10 ವರ್ಷದ ಹಳೆಯ ಆಧಾರ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ಮಹತ್ವದ ಸಂದೇಶವೊಂದನ್ನು ರವಾನಿಸಿದೆ. ಹಾಗಾದರೆ ಆ ಮಾಹಿತಿ ಏನು ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದೇಶದ ಪ್ರತಿಯೊಬ್ಬ ನಾಗರಿಕನ ವಿಶಿಷ್ಟ ಐಡಿ ಸಂಖ್ಯೆಯನ್ನು ಆಧಾರ್ ಕಾರ್ಡ್ ಮೇಲೆ ಮುದ್ರಿಸಲಾಗುತ್ತದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಹೊಸ ಸಿಮ್ ಕಾರ್ಡ್ ಖರೀದಿಸುವವರೆಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಾರ್ಡ್ ಅನ್ನು ಬಳಸಲಾಗುತ್ತದೆ.
ಆದರೆ, ಇತ್ತೀಚೆಗಷ್ಟೇ ಸರ್ಕಾರ 10 ವರ್ಷ ಹಳೆಯ ಆಧಾರ್ ಕಾರ್ಡ್ ಬಗ್ಗೆ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಸರ್ಕಾರದ ಈ ನಿರ್ಧಾರದಿಂದ 10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವವರು ತಪ್ಪದೇ ಅಪ್ಡೇಟ್ ಮಾಡುವಂತೆ ಸೂಚನೆ ನೀಡಲಾಗಿದೆ.
ಇದೀಗ ಕೇಂದ್ರ ಸರ್ಕಾರವು 10 ವರ್ಷ ಹಳೆಯ ಆಧಾರ್ ಕಾರ್ಡ್ ಅನ್ನು ನವೀಕರಿಸಲು ಸಲಹೆ ನೀಡಿದೆ. ಆದರೂ ಸರ್ಕಾರ ಇದನ್ನು ಕಡ್ಡಾಯಗೊಳಿಸಿಲ್ಲ. ನನ್ನ ಆಧಾರ್ ಪೋರ್ಟಲ್ ಅಥವಾ ಹತ್ತಿರದ ದಾಖಲಾತಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಯಾವುದೇ ನಾಗರಿಕರು ತಮ್ಮ ಆಧಾರ್ ದಾಖಲೆಗಳನ್ನು ನವೀಕರಿಸಬಹುದು.
10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಕಾರ್ಡ್ ಅನ್ನು ನವೀಕರಿಸಬೇಕು ಎಂದು ಸರ್ಕಾರ ತಿಳಿಸಿದೆ. ಯಾಕೆಂದರೆ ಹೀಗೆ ಮಾಡುವುದರಿಂದ ಅವರು ಭವಿಷ್ಯದಲ್ಲಿ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಇದಕ್ಕೆ ವಿರುದ್ಧವಾಗಿ, ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸದಿದ್ದರೆ, ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಹಿನ್ನೆಲೆ ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್ ಅನ್ನು ಸಕಾಲದಲ್ಲಿ ನವೀಕರಿಸಲು ಸರ್ಕಾರ ಮನವಿ ಮಾಡಿದೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 10 ವರ್ಷದ ಹಳೆಯ ಆಧಾರ್ ಕಾರ್ಡ್‌ನ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಜೊತೆಗೆ ನಾಗರಿಕರು ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಲು ಸಹ ಸೂಚಿಸಲಾಗಿದೆ.
ಕೆಲ ಆಧಾರ್ ಕಾರ್ಡ್ ಹೊಂದಿರುವವರ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳು ಬದಲಾಗಿವೆ. ಈ ಕಾರಣಕ್ಕಾಗಿಯೇ ಹೊಸ ಮಾಹಿತಿಯನ್ನು ನವೀಕರಿಸಲು ಸರ್ಕಾರ ಮನವಿ ಮಾಡಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.


