Politics
BREAKING : Karnataka Cabinet Meeting ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’

ಬೆಂಗಳೂರು : ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಬಹಳ ಕುತೂಹಲ ಮೂಡಿಸಿದೆ.
ಪರ ವಿರೋಧದ ನಡುವೆ ಜಾತಿ ಗಣತಿ ವರದಿ ಮಂಡನೆಯಾಗುತ್ತಿದ್ದು, ಜಾತಿ ಗಣತಿಯಲ್ಲೇನಿದೆ ಎಂಬುದು ಬಹಿರಂಗವಾಗುವ ಕಾಲ ಸನ್ನಿಹಿತವಾಗಿದೆ. ಇದರ ಜೊತೆ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ.



