ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ನಗರದ ಗೋದಾಮಿನಲ್ಲಿ ದಾಸ್ತಾನು ಮಾಡಿರುವ ಆರೋಪ ಗೋದಾಮಿಗೆ ದಾಳಿ, 500 ಕ್ವಿಂಟಾಲ್ ಅನ್ನಭಾಗ್ಯದ ಅಕ್ಕಿ ವಶಕ್ಕೆ

ಮಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ನಗರದ ಗೋದಾಮಿನಲ್ಲಿ ದಾಸ್ತಾನು ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ಹಾವೇರಿ ಸೇರಿ ಹಲವು ಭಾಗಗಳಿಂದ ಅನ್ನ ಭಾಗ್ಯದ ಅಕ್ಕಿ ಮಂಗಳೂರಿಗೆ ಸಾಗಾಟ ಮಾಡಿರುವ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ನೀರೇಶ್ವಾಲ್ಯ ಸಮೀಪದ ಅನುಗ್ರಹ ಎಂಟರ್‌ಪ್ರೈಸಸ್ ಎನ್ನುವ ಗೋದಾಮಿಗೆ ಅಧಿಕಾರಿಗಳು ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಬಿಳಿಯ ಗೋಣಿ ಚೀಲಗಳಲ್ಲಿ ಯಾವುದೇ ಬ್ರ್ಯಾಂಡ್ ಇಲ್ಲದ ಸುಮಾರು 500 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ. ಮಿಲ್‌ನಲ್ಲಿದ್ದ ವಿವಿಧ ಅಕ್ಕಿಯ ಮಾದರಿ ಸಂಗ್ರಹಿಸಿರುವ ಆಹಾರ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ರೈಸ್ ಮಿಲ್‌ಗಳಲ್ಲಿ ಅಕ್ಕಿ ಪಾಲಿಶ್ ಮಾಡಿ ಬೇರೆ ಬೇರೆ ಬ್ರ್ಯಾಂಡ್ ಹೆಸರಿನಲ್ಲಿ ಮಾರುಕಟ್ಟೆಗೆ ಪೂರೈಸಲಾಗುತ್ತಿದೆ. ದಲ್ಲಾಳಿಗಳ ಮೂಲಕ ಅಕ್ರಮವಾಗಿ ಅಕ್ಕಿ ಖರೀದಿಸಿ ಬೇರೆ ಬ್ರ್ಯಾಂಡ್ ಗಳಲ್ಲಿ ಮಾರಾಟ ಮಾಡುತ್ತಿರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಯಾವುದೇ ಬ್ರ್ಯಾಂಡ್‌ಗಳಿಲಲ್ಲದ ಅಕ್ಕಿ ದೊರೆತಿದ್ದು, ಪಡಿತರ ಸಾಧ್ಯತೆ ಇದೆ. ಹಾಗಾಗಿ ದಾಳಿ ನಡೆಸಿ ವಶಕ್ಕೆ ಪಡೆದು ಅಗತ್ಯ ವಸ್ತುಗಳ ಕಾಯ್ದೆಯ ಪ್ರಕಾರ ಪ್ರಕರಣ ದಾಖಲಿಸಿದ್ದೇವೆ. ಅಕ್ಕಿಗಳ ಮಾದರಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಪ್ರಾಧಿಕಾರದ ಲ್ಯಾಬ್ ಮೂಲಕ ಪರಿಶೀಲಿಸಿ ಮುಂದಿನ ಕ್ರಮ ಜರಗಿಸಲಾಗುವುದು ಎಂದು ಆಹಾರ ಇಲಾಖೆ ಉಪನಿರ್ದೇಶಕಿ ಅನಿತಾ ಮದೂÉರು ಅವರು ತಿಳಿಸಿದ್ದಾರೆ.


