ಬೆಳಗಾವಿ | ಸಂತಿಬಸ್ತವಾಡನಲ್ಲಿ ಧರ್ಮಗ್ರಂಥ ಸುಟ್ಟ ಪ್ರಕರಣ…ಕುರಾನ್ ಸುಟ್ಟ ಕಿಡಗೇಡಿಗಳು: ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ, ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಂ ಬಾಂಧವರು

ಬೆಳಗಾವಿ : ಮಸೀದಿಯಲ್ಲಿದ್ದ ಇಸ್ಲಾಂ ಧರ್ಮಗ್ರಂಥ ಕುರ್‌ಆನ್ ಪ್ರತಿಗಳನ್ನು ದುಷ್ಕರ್ಮಿಗಳು ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮಸೀದಿಯಲ್ಲಿದ್ದ ಗ್ರಂಥ ಪುಸ್ತಕ ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದಿದೆ. ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ.

ಇಂದು ಪ್ರಾರ್ಥನೆಗೆಂದು ಬಂದಾಗ ಗ್ರಂಥ ಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಕಂಡುಬಂದಿದೆ.

ಮಸೀದಿಯಲ್ಲಿ ಎಂದಿನಂತೆ (ಮೇ 12) ಪ್ರಾರ್ಥನೆ ಮಾಡಲು ಮುಸಲ್ಮಾನರು ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದನ್ನು ಗಮನಿಸಿದ್ದಾರೆ. ಹೀಗಾಗಿ ಪ್ರಾರ್ಥನೆ ಮುಗಿದ ಬಳಿಕ ಸುತ್ತಮುತ್ತ ಹುಡುಕಾಟ ನಡೆಸಿದಾಗ ಕುರಾನ್ ಮತ್ತು ಹದೀಸ್ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ.
ಈ ಘಟನೆಯಿಂದಾಗಿ ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನೆ ಬಗ್ಗೆ ಎಲ್ಲಡೆ ಸುದ್ದಿ ತಿಳಿಯುತ್ತಿದ್ದಂತೆ ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿ ಸಾವಿರಾರು ಮುಸ್ಲಿಂ ಮುಖಂಡರು, ಯುವಕರು ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಉತ್ತರ ಶಾಸಕ ಆಸೀಫ್ ಸೇಠ್ ಅವರು ಸಂತಿ ಬಸ್ತವಾಡ ಗ್ರಾಮದಲ್ಲಿ ದುಷ್ಕೃತ್ಯವನ್ನು ಎಸಗಿದ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಲು ಈಗಾಗಲೇ ಪೊಲೀಸ್ ಇಲಾಖೆಗ ಸೂಚಿಸಲಾಗಿದೆ. ಅಲ್ಲದೇ, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳದ ಪೊಲೀಸ್ ಅಧಿಕಾರಿಗಳ ವಿರುದ್ಧವು ಕ್ರಮಕೈಗೊಳ್ಳಲಾಗುವುದು ಎಂದರು.

ನಗರ ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು, ಮೂರು ದಿನದೊಳಗೆ ಈ ದುಷ್ಕೃತ್ಯ ಎಸಗಿದವರನ್ನು ಬಂಧಿಸಲಾಗುವುದು. ಸಂತಿಬಸ್ತವಾಡ ಗ್ರಾಮದಲ್ಲಿನ ಎಲ್ಲ ಸಮಾಜದವರು ಈ ಕೃತ್ಯವನ್ನು ಖಂಡಿಸಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಎಲ್ಲರೂ ಕೂಡ ಶಾಂತಿಯನ್ನು ಕಾಯ್ದುಕೊಳ್ಳಬೇಕೆಂದು ಕರೆ ನೀಡಿದರು.
ಈ ವೇಳೆ ನಗರದ ರಾಣಿ ಚೆನ್ನಮ್ಮ ವೃತ್ತದ ನಾಲ್ಕು ದಿಕ್ಕುಗಳಲ್ಲಿ ಜನಸ್ತೋಮವೇ ನೆರೆದಿತ್ತು. ಮುಂಜಾಗೃತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ವಹಿಸಿ, ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ನೀಡಲಾಗಿತ್ತು.


