
ವಿಜಯನಗರ 16-04-2025 ಆತ್ಮೀಯರು ಹಾಗೂ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ್ ರಾಯರೆಡ್ಡಿ ಅಣ್ಣನವರೊಂದಿಗೆ ನಮ್ಮ ಹಗರಿಬೊಮ್ಮನಹಳ್ಳಿ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನೆಡೆಸಲಾಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗು ಬೃಹತ್ ಸಮಾವೇಶ ಹಮ್ಮಿಕೊಂಡಿರುವುದರಿಂದ ಹಟ್ಟಿ, ಹಾಡಿ, ತಾಂಡ, ಪಾಳ್ಯ, ಮಜುರೆ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅಲ್ಲಿ ವಾಸಿಸುತ್ತಿರುವ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಸಲುವಾಗಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ್ ರಾಯರೆಡ್ಡಿ ಅಣ್ಣನವರೊಂದಿಗೆ ಇಂದು ಹಗರಿಬೊಮ್ಮನಹಳ್ಳಿಯ ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನೆಡೆಸಿ ಸಲಹೆ ಸೂಚನೆಗಳನ್ನು ನೀಡಲಾಯಿತು.

ಕೆ ಕೊಟ್ರೇಶ ಆಚಾರಿ ವಿಜಯನಗರ
ನೆಲ್ಲುಕುದುರೆ


