Local NewsState
ಸಂತಿಬಸ್ತವಾಡ ಗ್ರಾಮದಲ್ಲಿ ಕುರಾನ್ ಪುಸ್ತಕ ಕಳ್ಳತನ ಮಾಡಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಬೆಳಗಾವಿ ಗ್ರಾಮೀಣ ಠಾಣೆ ಸಿಪಿಐ ಅಮಾನತು ಮಾಡಿ ಆದೇಶ ಮಾಡಲಾಗಿದೆ

ಬೆಳಗಾವಿ: ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಕುರಾನ್ ಪುಸ್ತಕ ಕಳ್ಳತನ ಮಾಡಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಬೆಳಗಾವಿ ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ ಹಿರೇಮಠ ಅವರನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, ಕುರಾನ್ ಪುಸ್ತಕ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಮಂಜುನಾಥ ಹಿರೇಮಠ ಅಮಾನತು ಮಾಡಲಾಗಿದೆ. ಇವರು ಕರ್ತವ್ಯ ಲೋಪ ಎಸಗಿದ್ದರು ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಲ್ಲದೆ ಮುಸ್ಲಿಮ್ ಸಮಾಜದವರು ಸಿಪಿಐ ಅಮಾನತು ಮಾಡಬೇಕೆಂದು ಆಗ್ರಹಿಸಿದರು. ಅಲ್ಲದೇ ಬಂತಿ ಬಸ್ತವಾಡ ಗ್ರಾಮದಲ್ಲಿ ಈದ್ಗಾ ಗೋಪುರ ಧ್ವಂಸ ಪ್ರಕರಣದಲ್ಲಿ ಆರೋಪಿ ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ ವಹಿಸಿದ್ದರು ಎಂದರು.


