ಹುಕ್ಕೇರಿ ತಾಲೂಕ ಪಂಚಾಯಿತಿ ಸಭಾ ಭವನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಹುಕ್ಕೇರಿ ತಾಲೂಕ ಪಂಚಾಯಿತಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಜನರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸಿದರು.

ಹುಕ್ಕೇರಿ ತಾಲೂಕಿನ ಸುತ್ತಮುತ್ತಲಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಈ ಸಮಸ್ಯೆಗಳ ಆಲಿಸಿದ ಸಚಿವರು, ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಫೋನ್ ಕರೆ ಮೂಲಕ ತಿಳಿಸಿ, ಸಮಸ್ಯೆ ಬಗೆಹರಿಸಲು ಸೂಚಿಸಿದರು.

ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಹುಕ್ಕೇರಿ ತಹಸೀಲಾರ್ ಮಂಜುಳಾ ಕೆ. ನಾಯಕ, ಸಚಿವರ ಆಪ್ತ ಸಹಾಯಕ ಕಿರಣ ರಜಪೂತ ಸೇರಿದಂತೆ ತಾಲೂಕಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


