State
Trending

ಗ್ರಾಮ ಪಂಚಾಯತಗಳಲ್ಲಿ ರಚಿಸಲಾದ ಟಾಸ್ಕಪೋರ್ಸಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ.ಕಂದಾಯ ಸಚಿವ ಕೃಷ್ಣ ಭೈರೆಗೌಡ

ಬೆಳಗಾವಿ: ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು  ಗ್ರಾಮ ಪಂಚಾಯತಗಳಲ್ಲಿ ರಚಿಸಲಾದ ಟಾಸ್ಕಪೋರ್ಸಗಳು   ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ  ಎಂದು ಕಂದಾಯ ಸಚಿವರಾದ ಕೃಷ್ಣ ಭೈರೆಗೌಡ ಅವರು ತಿಳಿಸಿದರು.

ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ(ಜೂ.30) ಜರುಗಿದ ಕಂದಾಯ ಇಲಾಖೆ‌ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಪ್ರಾರಂಭವಾಗಿದ್ದು  ವಾಡಿಕೆಗಿಂತ ಹೆಚ್ಚಿನ‌ ಮಳೆ ಆಗುತ್ತಿದೆ. ಎಲ್ಲ ನದಿಗಳ ಒಳ ಹರಿವು ಹೆಚ್ವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಸಂಭವನೀಯ ಪ್ರವಾಹಕ್ಕೆ‌ ಒಳಗಾಗಬಹುದಾದ ಗ್ರಾಮಗಳಲ್ಲಿನ ಜನ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ‌ ಅಗತ್ಯ ಬಿದ್ದರೆ ಪೋಲಿಸ್ ಸಿಬ್ಬಂದಿಗಳ ಸಹಾಯ ಪಡೆದುಕೊಳ್ಳುವಂತೆ ಸೂಚಿಸಿದರು.

ಸಾರ್ವಜನಿಕೆಗೆ ತೊಂದರೆಯಾದರೆ ಪರಿಹಾರ ವಿತರಿಸಿ ಬರುವುದು ಅಧಿಕಾರಿಗಳ ಕೆಲಸವಲ್ಲ. ತೊಂದರೆಯಾಗುವ ಮುಂಚೆಯೇ ಸಾರ್ವಜನಿಕರಿಗೆ ತಿಳಿಹೇಳಿ ಅನಾಹುತಗಳನ್ನು ತಪ್ಪಿಸುವ ನೀರಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

ಹಾನಿಗಳನ್ನು ತಡೆಗಟ್ಟಲು ಮುಂಚಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಪಂಚಾಯತಿ ಪಿಡಿಓ ಸೇರಿದಂತೆ ಎಲ್ಲ ಸಿಬ್ಬಂದಿಗಳನ್ನು ಪ್ರವಾಹ ನಿರ್ವಹಣೆಗೆ ಶ್ರಮಿಸಬೇಕು.

ಜಿಲ್ಲೆಯಲ್ಲಿರುವ ಪಂಚಾಯಿತಿ ಸರ್ವೆ ಈಗಾಗಲೇ ಮಾಡಲಾಗಿದ್ದು ಪ್ರವಾಹ ಮಳೆಹಾನಿ ಪ್ರದೇಶಗಳನ್ನು ಗುರುತಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಕಡ್ಡಾಯವಾಗಿ ಜಾಗೃತಿ ಜನರನ್ನು ಸ್ಥಳಾಂತರಕ್ಕೆ ಕ್ರಮ ವಹಿಸಬೇಕು.

 

ಶಿಥಿಲಾವಸ್ಥೆಯಲ್ಲಿ ಇರುವಂತಹ ಶಾಲೆ,‌ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸದಂತೆ ನಿಗಾವಹಿಸಲು‌ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದರ ಜೊತೆಗೆ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿ ಇರುವಂತಹ‌ ಮನೆಗಳನ್ನು ಗುರುತಿಸಿ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು‌ ಮನ ಒಲಿಸುವಂತೆ ತಿಳಿಸಿದರು.

 

ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಪರಿಹಾರವನ್ನು ಮಾರ್ಗಸೂಚಿಗಳನ್ವಯ ವಿತರಿಸಬೇಕು. ಅತೀವೃಷ್ಠಿ ಸಂದರ್ಭದಲ್ಲಿ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯದ ಬೋಟ್ ಗಳ ವ್ಯವಸ್ಥೆ ಮಾಡಿಕೊಳ್ಳುವದರ ಜೊತೆಗೆ ಅವುಗಳ‌ ನಿರ್ವಹಣೆಯನ್ನು ಮಾಡಬೇಕು.

ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನೀರಿಕ್ಷಕರು ತಮ್ಮ‌ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆ, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳನ್ನು ಗುರುತಿಸಿ ಅವುಗಳ ಬಳಕೆ ನಿಷೇದಿಸಬೇಕು. ಅಲ್ಲದೇ ಹಳ್ಳ,ನದಿಗಳ ಹತ್ತಿರ ಜನ-ಜಾನುವಾರುಗಳ ಸಂಚಾರ‌ ನಿರ್ಬಂಧಿಸಬೇಕು. ಈ ಕಾರ್ಯದಲ್ಲಿ ಗ್ರಾಮ ಪಂಚಾಯತ ಹಾಗೂ ಪೊಲಿಸ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಸಂಭವನೀಯ ಅನಾಹುತ ತಪ್ಪಿಸಲು ‌ಮುಂದಾಗುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಪೋಡಿಮುಕ್ತ ಗ್ರಾಮ ಅಭಿಯಾನವನ್ನು ಹಮ್ಮಿಕೊಳ್ಳಬೇಕು. ತಹಶೀಲ್ದಾರ, ಉಪವಿಭಾಗಾಧಿಕಾರಿಗಳ ಹಂತದಲ್ಲಿ‌ನ ಕೋರ್ಟ ಕೇಸಗಳನ್ನು ತ್ವರಿತವಾಗಿ ವಿಲೇ ಮಾಡಬೇಕು. ಗ್ರಾಮಲೆಕ್ಕಾಧಿಕಾರಿಗಳಿಗೆ ಸ್ಥಳೀಯವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಲು ಗ್ರಾಮ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸಲು ಸ್ಥಳಾವಕಾಶ ಒದಗಿಸಲಾಗಿದೆ ಎಂದರು.

 

ಕಂದಾಯ ಇಲಾಖೆಗೆ ಸಂಬಂಧಿಸಿದ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ವಿನಾಕಾರಣ ಸಾರ್ವಜನಿಕರ ಕಚೇರಿ ಅಲೆದಾಟವನ್ನು ತಪ್ಪಿಸಬೇಕು. ಈ ಕಾರ್ಯದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು.

ಸಾಮಾಜಿಕ ಭದ್ರತೆ ಯೋಜನೆಯಡಿ ನೀಡಲಾಗುತ್ತಿರುವ ವಿವಿಧ ಪಿಂಚಣಿಗಳು ಅರ್ಹ ಫಲಾನುಭವಿಗಳಿಗೆ ದೊರಕುವಂತಾಗಬೇಕು.‌ ಜಿಲ್ಲೆಯಲ್ಲಿ ಅನರ್ಹರಿಗೆ ಪಿಂಚಣಿ ನೀಡಲಾಗುತ್ತಿರುವ ಕುರಿತು ದೂರುಗಳು ಬಂದಿದ್ದು‌ ಈ ಕುರಿತು ಪರಿಶೀಲಿಸಿ ವರದಿ ನೀಡಲು ಸಚಿವ ಕೃಷ್ಣ ಭೈರೇಗೌಡ ಸೂಚಿಸಿದರು.

 

ಕಂದಾಯ ಗ್ರಾಮದಡಿ ಹಕ್ಕು ಪತ್ರ ವಿತರಣೆಗೆ ಕ್ರಮ‌ ವಹಿಸಬೇಕು.  ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರ ವಿತರಣೆಗೆ ತ್ವರಿತ ಕ್ರಮ‌ ಜರುಗಿಸಬೇಕು. ಈ ಕುರಿತು ತಹಶೀಲ್ದಾರರು ಕ್ಷೇತ್ರ ಭೇಟಿ ಮಾಡಿ ಬಿಟ್ಟು ಹೋದಂತಹ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು‌ ಕ್ರಮ‌ ವಹಿಸುವಂತೆ ತಿಳಿಸಿದರು.

ಆಸ್ತಿಗಳ‌ ಭದ್ರತೆಗೆ ಆಧಾರ ಸಂಖ್ಯೆ ಜೊಡಣೆಯಾಗಿದ್ದು ಇದನ್ನು ಇನ್ನೂ‌ ಭದ್ರಪಡಿಸಲು ಈ-ಕೆವೈಸಿ ಮಾಡಲಾಗುತ್ತಿದೆ. ಇದರಿಂದಾಗಿ ಒಬ್ಬರ ಆಸ್ತಿ‌ ಇನ್ನೊಬ್ಬರ ಆಸ್ತಿ‌ ಪಾಲಾಗದಂತೆ ಮಾಡಬಹುದಾಗಿದೆ ಎಂದರು.

ಅನುಮತಿ ಇಲ್ಲದೇ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗಾಗಿ ಬಳಸಲಾಗುತ್ತಿದ್ದು, ಈ ಕುರಿತು ಪರಿಶೀಲಿಸಬೇಕು. ಕೃಷಿಯೇತರ ಚಟುವಟಿಕೆಗಳಿಗಾಗಿ ಬಳಸಲಾಗುವ ಭೂಮಿಯನ್ನು ಪಹಣಿಯಲ್ಲಿ ದಾಖಲಿಸುವುದರಿಂದ ಭೂಮಿ ಮಾರಾಟದಲ್ಲಿ ಆಗುವಂತಹ‌ ಮೋಸವನ್ನು ತಡೆಗಟ್ಟ ಬಹುದಾಗಿದೆ ಎಂದರು.

 

ಭೂ ಸುರಕ್ಷಾ ಯೋಜನೆಯಡಿ ಕಂದಾಯ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣ ಕಾರ್ಯವನ್ನು ಇನ್ನಷ್ಟು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಕಾರ್ಯದಲ್ಲಿ ಉದಾಸಿನ ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಸಿದ ಅವರು ಭೂ ಸುರಕ್ಷ ಯೋಜನೆಯಡಿ ಪ್ರಗತಿ ಸಾಧಿಸದೆ ಇರುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕ್ರಮಕ್ಕೆ ಸೂಚನೆ ನೀಡಿದರು.

ಕಂದಾಯ ಇಲಾಖೆಯ‌ ಎಲ್ಲ ಕಚೇರಿಗಳು ಇ-ಆಫೀಸನಡಿ ಕಾರ್ಯ ನಿರ್ವಹಿಸಬೇಕು. ಅದೇ ರೀತಿ ನಾಡ ಕಚೇರಿಗಳೂ ಇ-ಆಫೀಸನಲ್ಲಿಯೇ ಕಡತಗಳನ್ನು‌ ಮಂಡಿಸಬೇಕು.‌ ಈ ಕುರಿತು ಸಿಬ್ಬಂದಿಗಳಿಗೆ ಇ-ಆಫೀಸ್ ಬಳಕೆ ಕುರಿತು ತರಬೇತಿ ನೀಡಲು ತಿಳಿಸಿದರು.‌

ಜಿಲ್ಲೆಯಲ್ಲಿ ರಚನೆಯಾಗಿರುವ  ಹೊಸ ತಾಲೂಕುಗಳಿಗೆ  ಪ್ರಜಾಸೌಧ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಅಲ್ಲದೆ ಶೀಥಿಲಾವಸ್ಥೆಯಲ್ಲಿರುವ ನಾಡಕಚೇರಿಗಳ ದುರಸ್ಥಿಗೂ ಕ್ರಮ‌ ವಹಿಸಲಾಗುವದು ಎಂದು ಸಚಿವರು ತಿಳಿಸಿದರು.

 

ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಕಾರ್ಯಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು.‌ ಸಾರ್ವಜನಿಕರಿಗೆ ಅನುಕೂಲಾವಗುವಂತೆ ಕಾರ್ಯ ನಿರ್ವಹಿಸಬೇಕು.

ಜಿಲ್ಲಾಧಿಕಾರಿಗಳಾದ‌ ಮೊಹಮ್ಮದ್ ರೋಷನ್ ಅವರು‌ ಮಾತನಾಡಿ ನೆರೆಯ ಮಹಾರಾಷ್ಟ್ರದಲ್ಲಿ ಮಳೆ‌ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ‌ ಜಿಲ್ಲೆಯಲ್ಲಿನ ನದಿಗಳ ಒಳಹರಿವು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ‌ ಸಾಧಿಸಲಾಗುತ್ತಿದೆ ಎಂದು ತಿಳಿಸಿದರು.

ಮಳೆಯಿಂದಾಗಿ ಅಪಾಯ ಮಟ್ಟ ಮೀರಿ‌ ಹರಿಯುವಂತಹ ನದಿ, ಹಳ್ಳ, ಸೆರತುವೆಗಳ ಹತ್ತಿರ ಜನ-ಜಾನುವಾರುಗಳ ಸಂಚಾರ ನಿರ್ಬಂಧಿಸಿ ಪ್ರದರ್ಶನ‌ ಫಲಕಗಳನ್ನು ಅಳವಡಿಸಲು ಸೂಚನೆ ನೀಡಲಾಗಿದೆ ಎಂದರು.

ಅತೀವೃಷ್ಟಿ ಸಂದರ್ಭದಲ್ಲಿ ಜನ-ಜಾನುವಾರುಗಳ ಸುರಕ್ಷಿತ ಸ್ಥಳಾಂತರಕ್ಕೆ ಅಗತ್ಯದ ಬೋಟಗಳ‌ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಮಾತನಾಡಿ, ಅತೀವೃಷ್ಠಿಯಿಂದ ಹಾನಿಗೊಳಗಾಬಹುದಾದ ಗ್ರಾಮಗಳಲ್ಲಿ ಸಂಭವನೀಯ ಹಾನಿ ತಪ್ಪಿಸಲು ಈಗಾಗಲೇ ಗ್ರಾಮ ಪಂಚಾಯತಿಗಳೊಂದಿಗೆ ಸಭೆ ಜರುಗಿಸಿ ಅಗತ್ಯದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಶೀಥಿಲಾವಸ್ಥೆಯಲ್ಲಿ ಇರುವಂತಹ ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳಲ್ಲಿ ತರಗತಿಗಳನ್ನು ನಡೆಸದಂತೆ ಸೂಚನೆ ನೀಡಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ, ಕಂದಾಯ ಇಲಾಖೆ ಆಯುಕ್ತರಾದ ಪಿ.ಸುನೀಲಕುಮಾರ,  ಪ್ರಶಿಕ್ಷಣಾರ್ಥಿ ಐ.ಎ.ಎಸ್. ಅಧಿಕಾರಿ ಅಭಿನವ ಜೈನ್, ಅಪರ‌‌ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ,  ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ಕಂದಾಯ ಇಲಾಖೆ ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.

 

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button