State

ಟಿಕೆಟ್‌ ದರ ಏರಿಕೆಯ ಬೆನ್ನಲ್ಲೇ ಮದ್ಯಪಾನ ಪ್ರಿಯರಿಗೆ ಬಿಗ್ ಶಾಕ್‌ ಕೊಟ್ಟ ರಾಜ್ಯ ಸರ್ಕಾರ.!

ಬೆಂಗಳೂರು: ರಾಜ್ಯ ಸರ್ಕಾರದಿಂದ ಮದ್ಯಪಾನ ಪ್ರಿಯರಿಗೆ ಬಿಗ್‌ ಶಾಕಿಂಗ್‌ ಮಾಹಿತಿ ಬಂದಿದೆ. ಬಸ್‌ ಟಿಕೆಟ್‌ ದರ ಏರಿಕೆಯ ಬೆನ್ನಲ್ಲೇ ಇದೀಗ ಮತ್ತೊಂದು ಸುತ್ತಿನ ಶಾಕ್‌ ನೀಡುತ್ತಿದೆ. ಕರ್ನಾಟಕ ಸರ್ಕಾರವು ಬಿಯರ್ ದರವನ್ನು ಏರಿಸಿದೆ. ಅಬಕಾರಿ ಆದಾಯದ ಕೊರತೆಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರೀಮಿಯಂ ಬಿಯರ್ ಬೆಲೆ 10 ರಿಂದ 50 ರೂಪಾಯಿಗಳವರೆಗೆ ಹೆಚ್ಚಾಗಲಿದೆ. ಭಾರತೀಯ ನಿರ್ಮಿತ ಮದ್ಯದ ಬೆಲೆ ಕಡಿಮೆಯಾಗುವ ಸಾಧ್ಯತೆ ಇದೆ. ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಈ ಏರಿಕೆಯನ್ನು ವಿರೋಧಿಸಿದೆ.ಕಳೆದ ಎರಡು ವರ್ಷಗಳಲ್ಲಿ ಬಿಯರ್ ಮಾರಾಟ ದ್ವಿಗುಣಗೊಂಡಿದೆ.

ಪ್ರೀಮಿಯಂ ಮದ್ಯದ ಬಾಟಲ್​ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್​ನಲ್ಲಿನ ಅಲ್ಕೋಹಾಲ್​ ಅಂಶದ ಮೇಲೆ ದರ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ಜನವರಿ 20 ರಿಂದ ಜಾರಿಗೆ ಬರಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್​) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್​​ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬಿಯರ್​ ದರ ಪರಿಷ್ಕರಿಸಲು 2024ರ ಆಗಸ್ಟ್​ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರೀಮಿಯಂ ಬಿಯರ್​ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ​ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್​ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button