
ಹುಕ್ಕೇರಿ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾಗಿ ಗುರುಶಾಂತ ಪಾವಟೆ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದಿನ ಅಧಿಕಾರಿ ಎಚ್. ಎ. ಮಾಹುತ ಸೇವಾನಿವೃತ್ತಿ ಹೊಂದಿದ ಪ್ರಯುಕ್ತ ತೆರವಾದ ಸ್ಥಾನಕ್ಕೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಪಾವಟೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪಾವಟೆ ಇಲ್ಲಿಗೆ ಬರುವ ಬೆಳಗಾವಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರಿ ಸ್ವೀಕರಿಸಿ ಗುರುಶಾಂತ ಪಾವಟೆ ಮಾತನಾಡಿ, ತಾಲೂಕಿನಲ್ಲಿ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಲಾಗುವುದು. ಇದರೊಂದಿಗೆ ಜನಪ್ರತಿನಿಧಿಗಳು ಮತ್ತು ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಲಾಗುವುದು ಎಂದರು.



