State
BREAKING NEWS : ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ರೆ!ಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ ಬಸವರಾಜ್ ಕಡಲಗಿ

ಬೆಳಗಾವಿ: ಲಂಚದ ಹಣಕ್ಕೆ ಕೈಯ್ಯೊಡ್ಡಿದಾಗಲೇ ಲ್ಯಾಂಡ್ ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ನಡೆದಿದೆ.
ಭೂ ಮಾಪಕ ಬಸವರಾಜ್ ಕಡಲಗಿ ಲೋಕಾಯುಕ್ತ ಬಲೆಗೆ ಬಿದ್ದವರು. 11E ನಕ್ಷೆ ತಯಾರಿ ಮಾಡಿಕೊಡಲು ಭೂ ಮಾಪಕ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಪ್ರಕಾಶ್ ಮೈಲಾಕಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇದೀಗ ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಭೂ ಮಾಪಕನನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.


