CrimeLocal News
ಬೆಳಗಾವಿಯಲ್ಲಿ ಮತ್ತೊಂದು ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಮೂವರು ಸಾವು

ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ನಗರದ ಜೋಷಿಮಾಳ್ ನಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿದ್ದಾರೆ. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಓರ್ವಳ ಸ್ಥಿತಿ ಗಂಭೀರವಾಗಿದೆ.
ಸಂತೋಷ್ ಕುರುಡೇಕರ್ (44), ಸುವರ್ಣ, ಮಂಗಳಾ ಮೃತರು. ತಾಯಿ, ಮಗ, ಮಗಳು ಮೂವರು ಮೃತರು. ಸುನಂದಾ ಕುರುಡೇಕರ್ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ