State

ಬೆಳಗಾವಿ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅನುಕುವಾಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕರಿಗೆ ತ್ವರಿತ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಶುಕ್ರವಾರ (ಜು.17) ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಕ್ಕೆ ಆದಾಯ ತರುವ ಪ್ರಮುಖ ಇಲಾಖೆಗಳಲ್ಲಿ ಸಾರಿಗೆ ಇಲಾಖೆ ಕೂಡ ಒಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಸಿಬ್ಬಂದಿಗಳು ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಬ್ಬಂದಿಗಳ ಕೊರತೆ ಕಡಿಮೆಯಾಗಲಿದೆ ಎಂದರು.

ಬೈಲಹೊಂಗಲದಲ್ಲಿ 5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ “ಸ್ವಯಂ ಚಾಲಿತ ಚಾಲನಾ ಪಥ” ಉದ್ಘಾಟನೆ ಮಾಡಲಾಗಿದೆ. ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಎಲೆಕ್ಟ್ರಿಕ್ ಬಸ್ ಗಳನ್ನು ಒದಗಿಸಲಾಗುವುದು. ಕರ್ಕಶ ಹಾರ್ನ್, ಹೆಚ್ಚು ಪ್ರಕಾಶದ ಲೈಟ್ ಗಳು ಇರುವ ವಾಹನಗಳನ್ನು ಗುರುತಿಸಿ ದಂಡಗಳನ್ನು ವಿಧಿಸಬೇಕು. ಸಾರಿಗೆ ಇಲಾಖೆಯ ಕಚೇರಿಯಲ್ಲಿ ಮಧ್ಯವರ್ತಿಗಳ ಪ್ರವೇಶಕ್ಕೆ ನಿರ್ಬಂಧ ಹೇರಬೇಕು ಎಂದು ಹೇಳಿದರು.

ಜಿಲ್ಲೆಗೆ ಹೆಚ್ಚುವರಿ ಬಸ್ ಸೌಲಭ್ಯ

ಬೆಳಗಾವಿ ಜಿಲ್ಲೆಗೆ ಒಟ್ಟು 300 ಬಸ್ ಗಳನ್ನು ನೀಡಲಾಗುವುದು. ಅದರಲ್ಲಿ ನಗರ ಸುತ್ತಮುತ್ತ ಸಂಚಾರಕ್ಕೆ 100 ಎಲೆಕ್ಟ್ರಿಕ್ ಬಸ್ ಗಳನ್ನು ಸಹ ಒದಗಿಸಲಾಗುವುದು. ಅದೇ ರೀತಿಯಲ್ಲಿ ಕೇಂದ್ರ  ಹಾಗೂ ರಾಜ್ಯ ಸರ್ಕಾರದ 50:50 ಅನುಪಾತದಲ್ಲಿ ಸ್ಮಾರ್ಟ್ ಸಿಟಿಯೋಜನೆಯಡಿ ಸಿಟಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಾಗುವುದು ಎಂದು

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಮುಂಚೆ ಸಾರಿಗೆ ಇಲಾಖೆ ಕಚೇರಿ ಬಹಳ ಹಳೆಯದಾಗಿತ್ತು. ಬಹು ದಿನಗಳಿಂದ ನೂತನ ಕಟ್ಟಡದ ಬೇಡಿಕೆ ಇತ್ತು ಅದರಂತೆ ಸಿ.ಎಂ ಸಿದ್ದರಾಮಯ್ಯ ಅನುಮೋದನೆಯೊಂದಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಶ್ರಮದಿಂದ ನಗರದಲ್ಲಿ ಸಾರಿಗೆ ಇಲಾಖೆ ನೂತನ ಕಟ್ಟಡ ಲೋಕಾರ್ಪಣೆಗೊಂಡಿದೆ ಎಂದು

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.

ಕಟ್ಟುನಿಟ್ಟನ ಸಂಚಾರಿ ನಿಯಮ ಜಾರಿಗೆ ತರಲು ಸಲಹೆ

ಸಾರಿಗೆ ಇಲಾಖೆಗೆ ಇನ್ನು ಸಾಕಷ್ಟು ಕಾಯಕಲ್ಪ ನೀಡುವ ಯೋಜನೆಗಳಿವೆ. ಇಲಾಖೆಯಿಂದ ಸಾರ್ವಜನಿಕರಿಗೆ ಸಲಹೆ- ಸೂಚನೆ ಸೇರಿದಂತೆ ವಾಹನ ಚಾಲಕರಿಗೆ ಅಗತ್ಯ ತರಬೇತಿಗಳನ್ನು ನೀಡಬೇಕು. ವಾಹನ ಚಾಲನಾ ಪರವಾನಿಗೆ ನೀಡಲು ಇನ್ನಷ್ಟು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿ ಪರವಾನಿಗೆ ನೀಡಬೇಕು. ಇದರಿಂದ ಅಪಘಾತಗಳ ಪ್ರಮಾಣ ಬಹಳಷ್ಟು ಕಡಿಮೆಯಾಗಲಿವೆ ಎಂದು ಹೇಳಿದರು.

ಜಿಲ್ಲೆಯ ಅಗತ್ಯ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಸಚಿವರು, ಶಾಸಕರೊಂದಿಗೆ ಚರ್ಚಿಸಿ ಅಗತ್ಯ ಪಟ್ಟಿ ತಯಾರಿಸಲಾಗಿದೆ. ಜನರ ಬೇಡಿಕೆಯಂತೆ ಹೆಚ್ಚುವರಿಯಾಗಿ ಬಸ್ ಗಳನ್ನು ಜಿಲ್ಲೆಗೆ ನೀಡಬೇಕು. ಅಂದಾಜು 500 ಬಸ್ ಗಳನ್ನು ಜಿಲ್ಲೆಗೆ ನೀಡಿದಲ್ಲಿ, ವಿದ್ಯಾರ್ಥಿಗಳ ಸಾರಿಗೆ ಸೌಲಭ್ಯಕ್ಕೆ ಅನುಕವಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟರು.

ನಿಯಮ ಉಲ್ಲಂಘಿತ ವಾಹನಗಳಿಗೆ ದಂಡ

ಹಳೆಯ ವಾಹನಗಳನ್ನು ಗುರುತಿಸಿ ಅಂತಹ ವಾಹನಗಳ ಆರ್.ಸಿ ನವೀಕರಣಕ್ಕೆ ಸೂಚನೆ ನೀಡಬೇಕು. ಸ್ಥಳೀಯವಾಗಿ ಟ್ರ್ಯಾಕ್ಟರ್ ಗಳಲ್ಲಿ ಅತಿ ಬಾರ ಮತ್ತು ಅಧಿಕ ಸ್ಪೀಕರ್ ಬಳಸಿ ಸಾರ್ವಜನಿಕರಿಗೆ ಕಿರಿ-ಕಿರಿ ಮಾಡಲಾಗುತ್ತಿದೆ ಅಂತಹ ವಾಹನಗಳನ್ನು ತಡೆದು ದಂಡ ವಿಧಿಸಬೇಕು.

ಜಿಲ್ಲೆಯಲ್ಲಿ ಇನ್ನಷ್ಟು ಬಸ್ ನಿಲ್ದಾಣಗಳ ನಿರ್ಮಾಣದ ಅವಶ್ಯಕತೆ ಇದೆ. ಸರ್ಕಾರದ ಹಂತದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸ್ಥಳಗಳನ್ನು ಮಂಜೂರು ಮಾಡಲಾಗುವುದು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಸ್ಥಳಗಳನ್ನು ಬಳಸಿಕೊಂಡು ಅಗತ್ಯವಿರುವ ಸ್ಥಳಗಳಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಾರಿಗೆ ಇಲಾಖೆ ಯೋಜನೆಗಳನ್ನು ರೂಪಿಸಬಹುದು ಎಂದು ಸಚಿವ ಸತೀಶ ಜಾರಕಿಹೊಳಿ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಜಿಲ್ಲೆಯ ಸಾರಿಗೆ ಇಲಾಖೆಯ ಕಚೇರಿಯಲ್ಲಿ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ಇನ್ನಿತರ ಸಿಬ್ಬಂದಿಗಳ ಕೊರತೆ ಬಹಳಷ್ಟಿದೆ. ಸದ್ಯ ಇರುವ ಸಿಬ್ಬಂದಿಗಳ ಮೇಲಿರುವ ಹೊರೆ ಕಡಿಮೆ ಮಾಡಲು ಅದಷ್ಟು ಬೇಗ ಇನ್ನಷ್ಟು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಇದರಿಂದ ಮತ್ತಷ್ಟು ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಇಲಾಖೆಯ ಅಧಿಕಾರಿಗಳಿಗೆ ಸಹಾಯವಾಗಲಿದೆ ಎಂದರು.

ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ವಾಹನ ಸವಾರರು ಹಾಗೂ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಿ, ತ್ವರಿತವಾಗಿ ಸೇವೆಗಳನ್ನು ಒದಗಿಸಬೇಕು ಎಂದು ಶಾಸಕ ಆಸೀಫ್ (ರಾಜು) ಸೇಠ್ ಸಲಹೆ  ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಹಾಗೂ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾದ ಯೋಗೀಶ್ ಎ. ಎಂ, ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಧಾರವಾಡ ಉತ್ತರದ (ಪ್ರವರ್ತನ) ಅಪರ ಸಾರಿಗೆ ಆಯುಕ್ತರಾದ ಕೆ. ಟಿ ಹಾಲಸ್ವಾಮಿ, ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಎಂ. ಪಿ.ಓಂಕಾರೇಶ್ವರಿ, ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ್ ಮುಂಡಾಸ, ನಿವೃತ್ತ ಪ್ರಾದೇಶಿಕ ಸಾರಿಗೆ ಆಯುಕ್ತರಾದ ಶಿವಾನಂದ ಮಗದುಮ್ಮ, ಗುತ್ತಿಗೆದಾರ ಉದಯ ಕುಮಾರ ಆರ್. ಶೆಟ್ಟಿ ಸೇರಿದಂತೆ ಸಾರಿಗೆ ಇಲಾಖೆ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button