
ದೇಶದಲ್ಲೇ ಪ್ರಪ್ರಥಮವಾಗಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಸಮುಚ್ಛಯ ಮತ್ತು ಅವರ ಮಕ್ಕಳಿಗೆ ವಸತಿ ಶಾಲೆಗಳನ್ನು ಆರಂಭಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಬೆಳಗಾವಿ ಯಮನಾಪೂರದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಉದ್ಘಾಟನೆ ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ, ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕರ್ನಾಟಕದ ಪ್ರತಿ ಕಂಪನಿಗಳಲ್ಲಿಯೂ ಯೋಜನೆಗಳನ್ನು ವಿಸ್ತರಿಸಲಾಗುವುದು. ವಲಸೆ ಕಾರ್ಮಿಕರ ವಸತಿಗಾಗಿ ತಾತ್ಕಾಲಿಕ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಪ್ರಪ್ರಥಮವಾಗಿ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಆರಂಭಿಸಲಾಗಿದೆ. ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕ ಕಾರ್ಡ್ ರಿನಿವಲ್ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕಳೆದ 2 ವರ್ಷದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಮುಂದಾಳತ್ವದಲ್ಲಿ ಕಾರ್ಮಿಕ ಇಲಾಖೆಯಲ್ಲಿ ಕ್ರಾಂತಿಯನ್ನು ಮಾಡಲಾಗಿದೆ. ಹೊಸ ಹೊಸ ಯೋಜನೆಗಳು, ಸಹಾಯ ಸವಲತ್ತುಗಳನ್ನು ನೀಡಿ, ಹೊಸ ತಂತ್ರಜ್ಞಾನದ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ. ಸುದೀರ್ಘ ಚಿಂತನೆಯನ್ನು ನಡೆಸಿ, ವಲಸೆ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ವಸತಿ ಸಮುಚ್ಛಯ ನಿರ್ಮಿಸಿರುವುದು ಸಿದ್ಧರಾಮಯ್ಯ ಸರ್ಕಾರದ ಸಾಧನೆ. ಇನ್ನು ಸ್ಮಾರ್ಟ್ ಕಾರ್ಡಗಳಿಂದ ಆನಲೈನ್ ಮೂಲಕ ಸವಲತ್ತುಗಳನ್ನು ಪಡೆಯಬಹುದಾಗಿದೆ. ಈಗಾಗಲೇ ಕಾರ್ಮಿಕರ ಮಕ್ಕಳಿಗೆ 3 ವಸತಿ ಶಾಲೆಗಳನ್ನು ಸರ್ಕಾರ ಮಂಜೂರು ಮಾಡಿದೆ. ಬೆಳಗಾವಿ ಸೇರಿದಂತೆ ಸಂಪೂರ್ಣ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ನಿರ್ಮಿಸಬೇಕು. ಇದು ಕಾರ್ಮಿಕರ ಮಕ್ಕಳ ಭವಿಷ್ಯತ್ತಿಗೆ ಅನುಕೂಲವಾಗಲಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಘಟಿತ ಮತ್ತು ಅಸಂಘಟಿತ ಎಲ್ಲ ಕ್ಷೇತ್ರದ ಕಾರ್ಮಿಕರ ಏಳ್ಗೆ, ಅಭಿವೃದ್ಧಿ, ಸಮಾನತೆ ನೀಡುವ ಉದ್ಧೇಶ ಕಾಂಗ್ರೆಸ್ ಸರ್ಕಾರದ್ದಾಗಿದೆ. ದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಕಾರ್ಮಿಕರ ಮಕ್ಕಳಿಗಾಗಿ 3 ಶಾಲೆಗಳನ್ನು ನಿರ್ಮಿಸಬೇಕು. 91 ಕ್ಷೇತ್ರದ ಅತ್ಯಂತ ಸರಳ ರೀತಿಯಲ್ಲಿ ಕಾರ್ಮಿಕರ ಕಾರ್ಡ್’ಗಳ ರಿನಿವಲ್ ಮಾಡಿಸಲು ಜಾಗೃತಿ ಮೂಡಿಸಬೇಕು. ನಿಜವಾದ ಕಾರ್ಮಿಕರಿಗೆ ಅನ್ಯಾಯವಾಗಬಾರದು. ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಬಾರದು. ಇದು ಕಾರ್ಮಿಕ ಇಲಾಖೆಯ ಜವಾಬ್ದಾರಿಯಾಗಿದ್ದು, ಅವರು ರಿನಿವಲ್ ಜಾಥಾ ನಡೆಸಬೇಕು ಎಂದರು.
ಉತ್ತರ ಶಾಸಕ ಆಸೀಫ್ ಸೇಠ್ ಅವರು 2 ವರೆ ವರ್ಷದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದೆ. ನಮ್ಮ ಸರ್ಕಾರದ ಸಚಿವರುಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಶ್ರಮ ಪಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನರ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ ಎಂದರು