Crime
BREAKING: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ
ತಡರಾತ್ರಿ ಡಾಬಾದಲ್ಲಿ ಪಾರ್ಟಿ ಮಾಡ್ತಿದ್ದಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಕೊಲೆ ಮಾಡಿದ ಘಟನೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ 45 ವರ್ಷದ ನಂಜೇಶ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದಾಗ ನಾಲ್ಕೈದು ಜನ ದಾಳಿ ನಡೆಸಿದ್ದು, ಮಾರಕಾಸ್ತ್ರಗಳಿಂದ ಥಳಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಹಚ್ಚಲು ಗ್ರಾಮ ಪಂಚಾಯಿತಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜೇಶ್ ಸಾವನ್ನಪ್ಪಿದ್ದಾರೆ. ಹೊಂಗಾಳದೊಡ್ಡಿಯ ನಂಜೇಶ್ ನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಾತನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.