ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ. ರಿ. ದೆಹಲಿ; ಹಾಸನ ಜಿಲ್ಲೆಯ ಸಮಿತಿಯ ಜೊತೆಗೆ ಸಂಘಟನೆ ಬಗ್ಗೆ ಚರ್ಚೆ ಮಾಡಲಾಯಿತು.

ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ. ರಿ. ದೆಹಲಿ
ಇಂದು ಹಾಸನ ಜಿಲ್ಲೆಯ ಎಲ್ಲಾ ತಾಲೂಕಿನ ಪದಾಧಿಕಾರಿಗಳೊಂದಿಗೆ ಮತ್ತು ಜಿಲ್ಲಾಧ್ಯಕ್ಷ ಮತ್ತು ಜಿಲ್ಲಾ ಉಪಾಧ್ಯಕ್ಷರು ಹಾಗೂ ಜಿಲ್ಲಾ ಸಮಿತಿಯ ಜೊತೆಗೆ ಸಂಘಟನೆ ಬಗ್ಗೆ ಚರ್ಚೆ ಮಾಡಲಾಯಿತು.
ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಯ ಜೊತೆಗೆ ಒಂದು ಸಾವಿರ ರೂಪಾಯಿ ಪ್ರತಿ ಬೆಲೆಗೆ ಪ್ರೋತ್ಸಾಹಧನ ರಾಜ್ಯ ಸರ್ಕಾರ ನೀಡಬೇಕು.
ರೈತರೇ ಸ್ವಉದ್ಯೋಗಗಳನ್ನು ಸೃಷ್ಟಿಸಬೇಕು ಕೈಗಾರಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ಸಣ್ಣ ಕೈಗಾರಿಕೆ ಹಾಗೂ ಬೃಹತ್ ಕೈಗಾರಿಕೆಗಳನ್ನು ರೈತ ಸಂಘಟನೆಗಳಿಂದ ನಿರ್ಮಿಸಬೇಕು.
ರೈತ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬದುಕನ್ನು ಕಟ್ಟಿಕೊಡುವ ಬಗ್ಗೆ ಚರ್ಚಿಸಲಾಯಿತು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಬ್ಸಿಡಿ ಯ ಬಗ್ಗೆ ಚರ್ಚೆ ಮಾಡಲಾಯಿತು. ರೈತರು ಈ ಸಬ್ಸಿಡಿ ಹಣವನ್ನು ಉಪಯೋಗ ಪಡೆದುಕೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ಮಾಡಲಾಯಿತು.
ರೈತ ಸಂಘಟನೆಯ ವತಿಯಿಂದ ಸಹಕಾರ ಸಂಘ, ಸಹಕಾರ ಬ್ಯಾಂಕ್ ಮಾಡುವ ಬಗ್ಗೆ ಚರ್ಚಿಸಲಾಯಿತು.
ಮಹಿಳೆಯರಿಗೆ ವಿಶೇಷವಾಗಿ ಆರ್ಥಿಕವಾಗಿ ಸದೃಢಪಡಿಸುವ ಬಗ್ಗೆ ಚರ್ಚಿಸಲಾಯಿತು..
* ಸಂಘಟನೆಯನ್ನು ಇಡೀ ರಾಜ್ಯದಲ್ಲಿ ಅಷ್ಟೇ ಅಲ್ಲ ಇಡೀ ದೇಶದಲ್ಲೇ ಸದೃಢಪಡಿಸುವ ಬಗ್ಗೆ ಚರ್ಚೆ ಮಾಡಲಾಯಿತು…
ರಾಜ್ಯದ ಜಿಲ್ಲೆಯ ಮತ್ತು ತಾಲೂಕಿನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು…


