ಬೆಳಗಾವಿ: ‘ಜೈ ಕಿಸಾನ್ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಬಂದ್ ಮಾಡಬಾರದು’ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ಬೆಳಗಾವಿ: ಇಲ್ಲಿನ ಜೈ ಕಿಸಾನ್ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಬಂದ್ ಮಾಡಬಾರದು ಎಂದು ಒತ್ತಾಯಿಸಿ ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿಯ ರೈತರು ಹಾಗೂ ಕರ್ನಾಟಕ ಯುವ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
‘ಈ ಮಾರುಕಟ್ಟೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಇದ್ದು, ತರಕಾರಿ ಸಾಗಣೆಗೆ ಅನುಕೂಲಕರ ವಾತಾವರಣವಿದೆ. ಇದರಿಂದ ಸಾಗಣೆ ವೆಚ್ಚವೂ ಕಡಿಮೆಯಾಗುತ್ತಿದೆ. ಆದರೆ, ರಾಜಕೀಯ ಒತ್ತಡಕ್ಕೆ ಮಣಿದು ಕೆಲವು ಅಧಿಕಾರಿಗಳು ಇದನ್ನು ಮುಚ್ಚಲು ಹುನ್ನಾರ ನಡೆಸಿದ್ದಾರೆ. ಇದಕ್ಕೆ ಆಸ್ಪದ ನೀಡಬಾರದು’ ಎಂದು ಒತ್ತಾಯಿಸಿದರು.
‘ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಮುಚ್ಚಿದರೆ, ರೈತರು ಅನಿವಾರ್ಯವಾಗಿ ಎಪಿಎಂಸಿಗೆ ಹೋಗಬೇಕಾಗುತ್ತದೆ. ತರಕಾರಿ ಸಾಗಣೆ ವೆಚ್ಚವೂ ಹೆಚ್ಚುತ್ತದೆ. ಈಗಾಗಲೇ ಎಪಿಎಂಸಿಯಲ್ಲಿ ವ್ಯಾಪಾರಿಗಳಿಂದ ಹೆಚ್ಚಿನ ಕಮಿಷನ್ ಪಡೆದು ಮೋಸ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ಆರ್ಥಿಕ ನಷ್ಟವಾಗಲಿದೆ’ ಎಂದು ದೂರಿದರು.
ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಬೆಳಗಾವಿಯಲ್ಲಿ ಜೈ ಕಿಸಾನ್ ಖಾಸಗಿ ಸಗಟು ತರಕಾರಿ ಮಾರುಕಟ್ಟೆಯ ವ್ಯಾಪಾರಿಗಳು ಮೇಯರ್ ಮಂಗೇಶ ಪವಾರ ಅವರನ್ನು ಭೇಟಿಯಾಗಿ ಚರ್ಚಿಸಿದರು.