ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅನರ್ಹರು ಕೂಡ ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ರಾಜ್ಯದಲ್ಲಿ 8 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಸಾಧ್ಯತೆ.!

ಬೆಂಗಳೂರು: ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಇವುಗಳಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚು ಸೌಲಭ್ಯಗಳು ದೊರೆಯಲಿವೆ. ಆದ್ದರಿಂದ ಈ ಕಾರ್ಡ್ ಅನ್ನು ಅರ್ಹರಲ್ಲದವರು ಸಹ ಹೊಂದಿದ್ದಾರೆ ಎನ್ನುವ ಆರೋಪ ಕೇಳಿಬಂದ ತಕ್ಷಣವೇ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಅಲ್ಲದೆ, ಇದೀಗ 8ಲಕ್ಷ ಬಿಪಿಎಲ್ ಕುಟುಂಬಗಳಿಗೆ ಶಾಕ್ ನೀಡಲು ಮುಂದಾಗಿದೆ.
ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್‌ಗಳನ್ನು ಬಡತನ ರೇಖೆಗಳಿಗಿಂತ ಕೆಳಗಿನವರಿಗೆ ನೀಡಲಾಗುತ್ತದೆ. ಆದರೆ, ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅನರ್ಹರು ಕೂಡ ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು. ಈಗಾಗಲೇ ಈ ಹಿಂದೆ ಕಾಂಗ್ರೆಸ್ ಸರ್ಕಾರ ಇವುಗಳಿಗೆ ಕಡಿವಾಣ ಹಾಕಲು ಮುಂದಾಗಿತ್ತು. ಆದರೆ, ಆ ವೇಳೆ ಅರ್ಹರ ಬಳಿಯಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿದೆ ಎಂದು ಹಲವು ಜಿಲ್ಲೆಗಳಲ್ಲಿ ಜನರು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿದ್ದರು. ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಯಾರೆಲ್ಲ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆಯೋ ಅಂತಹವರಿಗೆ ಮತ್ತೆ ಕಾರ್ಡ್‌ಗಳನ್ನು ಹಿಂತಿರುಗಿಸಲಾಗುವುದು.
ಅಲ್ಲದೆ, ಅವರಿಗೆ ಸಿಗಬೇಕಾದ ಪಡಿತರವನ್ನು ಸಹ ನೀಡಲಾಗುತ್ತದೆ ಎಂದು ತಿಳಿಸಿತ್ತು. ಆ ವೇಳೆಯೇ ಪಡಿತರ ಚೀಟಿ ಪರಿಶೀಲನೆ ಕಾರ್ಯವನ್ನು ಸರ್ಕಾರ ನಿಲ್ಲಿಸಿತ್ತು. ಆದರೆ, ಇದೀಗ ಮತ್ತೆ ರಾಜ್ಯಸ ಸರ್ಕಾರ ಪರಿಶೀಲನೆಗೆ ಮುಂದಾಗಿದ್ದು, ಈ ವೇಳೆ ಒಂದಲ್ಲ.. ಎರಡಲ್ಲ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆಯಾಗಿವೆ. ಈ ಪೈಕಿ 8 ಲಕ್ಷ ಪಡಿತರ ಚೀಟಿಗಳನ್ನು ರದ್ದು ಮಾಡಲು ಆಹಾರ ಇಲಾಖೆ ನಿರ್ಧರಿಸಿದೆ.
ಆಹಾರ ಇಲಾಖೆಯ ಪರಿಶೀಲವೇ ವೇಳೆ ರಾಜ್ಯದಲ್ಲಿ ಒಂದಲ್ಲ.. ಎರಡಲ್ಲ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ ಎಂದು ತಿಳಿದುಬಂದಿದೆ. ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದರಿಂದ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಪಡಿತರ ಸಿಗದಂತಾಗಿತ್ತು. ಆದ್ದರಿಂದ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಕೈಹಾಕಿತ್ತು. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲೇ 1,00,000ಕ್ಕೂ ಹೆಚ್ಚು ಜನ ಬಿಪಿಎಲ್ ಕಾರ್ಡ್ ಹೊಂದಿರುವುದು ಇದೀಗ ಬಟಾಬಯಲಾಗಿದೆ. ಇನ್ನು ರಾಜ್ಯಾದ್ಯಂತ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆಯಾಗಿದ್ದು, ಈ ಪೈಕಿ 8 ಲಕ್ಷ ಪಡಿತರ ಚೀಟಿಗಳನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಅಧಿಕೃತ ವರದಿ ಸಲ್ಲಿಸಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಮೃತಪಟ್ಟವರ ಹೆಸರು ಹಾಗೂ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಕೆ ಮಾಡಿಕೊಂಡು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ವಿಚಾರವೂ ಬಟಾಬಯಲಾಗಿದೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ವಾಸವಾಗಿರುವ ಹೊರರಾಜ್ಯದವರು ಕೂಡ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದು, ಇವುಗಳನ್ನು ಬಳಕೆ ಮಾಡಿಕೊಂಡು ಪಡಿತರ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿಯೂ ಇದೀಗ ಬೆಳಕಿದೆ ಬಂದಿದೆ. ರಾಜ್ಯ ಸರ್ಕಾರ ಇದೀಗ ಇವುಗಳಿಗೆಲ್ಲ ಕಡಿವಾಣ ಹಾಕಲು ನಿರ್ಧರಿಸಿದೆ.