ರಾಜ್ಯ ಸರ್ಕಾರದಿಂದ 5 ಮಂದಿ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

IAS Officers Transfer: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ದಿಢೀರ್ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ, ಯಾವ ಹುದ್ದೆಗೆ ವರ್ಗಾಹಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ.ರಂದೀಪ್ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕ ನಿತೇಶ್ ಪಾಟೀಲ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಆರ್.ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿ ಇದ್ದ ಡಾ.ಸತೀಶ ಬಿ.ಸಿ. ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರನ್ನಾಗಿ, ಡಾ.ಎಂ.ಎಸ್.ದಿವಾಕರ್ ಅವರನ್ನು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ, ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನು ದಿವಾಕರ್ ಅವರಿಗೆ ನೀಡಲಾಗಿದೆ.
ಯಾರಿಗೆ ಯಾವ ಹುದ್ದೆ ಜವಾಬ್ದಾರಿ?
* ಡಿ.ರಂದೀಪ್: ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹೆಚ್ಚುವರಿ ಹುದ್ದೆ ಜವಾಬ್ದಾರಿ
* ನಿತೇಶ್ ಪಾಟೀಲ್: ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ
* ಆರ್.ರಾಮಚಂದ್ರನ್: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯಕಾರಿ ನಿರ್ದೇಶಕ
* ಡಾ. ಬಿ.ಸಿ.ಸತೀಶ: ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕ
* ಎಂಎಸ್ ದಿವಾಕರ್: ಕೆಎಸ್‌ಎನ್‌ಡಿಎಂಸಿ ಜೊತೆಗೆ ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹೆಚ್ಚುವರಿ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.


