Ration Card: ಇಲ್ಲಿದೆ ಸಂಪೂರ್ಣ ಮಾಹಿತಿ ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನವೇ ಕೊನೆಯ ದಿನ

ಬೆಂಗಳೂರು, ಜನವರಿ 15: ಬಹುದಿನಗಳಿಂದ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಜನವರಿ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಪಡಿತರ ಚೀಟಿದಾರರು ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು.
ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ ಅಗತ್ಯ.
ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ
* ಮಗುವಿನ ಜನನ ಪ್ರಮಾಣಪತ್ರ
* ಹೆತ್ತವರ ಆಧಾರ್ ಕಾರ್ಡ್


