Local News

ಬೆಳಗಾವಿ: ಮಚ್ಚೆ ಗ್ರಾಮದ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಬೆಳಗಾವಿ:  ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದಿದ್ದಾರೆಂಬ ಆರೋಪ ಕೇಳಿ ಬಂದಿದ್ದು,  ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು
ರಾಯಣ್ಣ ಮೂರ್ತಿಗೆ ಮೊದಲು  ಕಪ್ಪು ಬಣ್ಣವೇ ಇತ್ತು. ಅದರ ಮೇಲೆಯೇ ಮತ್ತೆ ಕರಿ ಮಸಿ ಸುರಿದಿದ್ದಾರೆಂದು ತಡರಾತ್ರಿ ತಿಳಿದು ಬಂದಿದ್ದು, ಕೆಲಕಾಲ ಯಾರೂ ಇದನ್ನು ಗಮನಿಸಿರಲಿಲ್ಲ. ರಾತ್ರಿ ಗ್ರಾಮದ ಕೆಲವು ಯುವಕರ ಗಮನಕ್ಕೆ ಬಂದಿದೆ. ಕೆಲವೇ ನಿಮಿಷಗಳಲ್ಲಿ ಹಲವರು ಸ್ಥಳದಲ್ಲಿ ಸೇರಿ ಘೋಷಣೆ ಕೂಗಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಭದ್ರತಾ ಕ್ರಮ ಕೈಗೊಂಡಿದ್ದಾರೆ.
ನಗರ ಪೊಲೀಸ್‌ ಕಮಿಷನರ್‌ ಭೂಷಣ ಬೋರಸೆ, ಡಿಸಿಪಿ ನಾರಾಯಣ ಭರಮನಿ ಕೂಡ ಸ್ಥಳಕ್ಕೆ ಧಾವಿಸಿದ್ದಾರೆ. ಅವರಿಗೆ ಸುತ್ತುವರಿದ ಜನ, ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಮುಂಜಾಗೃತಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಪ್ರತಿಕ್ರಿಯೆಸಿದ್ದು, ‌ರಾಯಣ್ಣನ ಪ್ರತಿಮೆಗೆ ಯಾರೋ ಏನೋ ಹಾಕಿದ್ದಾರೆ ಎಂಬ ದೂರು ನಮಗೆ ಬಂದಿದೆ. ತಕ್ಷಣ ಎಲ್ಲಾ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬಂದೋಬಸ್ತ್ ವಹಿಸಿದ್ದಾರೆ. ಪ್ರತಿಮೆ ಸ್ಥಳದಿಂದ ಮಾದರಿಯನ್ನು ಸಂಗ್ರಹಿಸಲಾಗಿದೆ. ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಭೇಟಿ ನೀಡಿದೆ. ಪ್ರತಿಮೆಯಿಂದ ಕೇವಲ 10 ಮೀ ದೂರದಲ್ಲಿ ಸಿಸಿಟಿವಿ ಇದೆ. ನಮ್ಮ ತಂಡವು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದೆ. ನಾವು ದೂರು ಪಡೆದುಕೊಡಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button