Local NewsState

ಬೆಳಗಾವಿಯಲ್ಲಿ ಕನ್ನಡ ಹಬ್ಬ ಫೆ. 24 ರಂದು ಸಂಜೆ 6 ಗಂಟೆಗೆ ಜಿಲ್ಲಾ ಕೀಡಾಂಗಣದಲ್ಲಿ 70 ನೇ ಕನ್ನಡ ರಾಜ್ಯೋತ್ಸವ 2025-26ರ ಕನ್ನಡ ಹಬ್ಬ ಕಾರ್ಯಕ್ರಮ

ಬೆಳಗಾವಿ: ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 24 ರಂದು ಸಂಜೆ 6 ಗಂಟೆಗೆ ಜಿಲ್ಲಾ ಕೀಡಾಂಗಣದಲ್ಲಿ 70 ನೇ ಕನ್ನಡ ರಾಜ್ಯೋತ್ಸವ 2025-26ರ ಕನ್ನಡ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ಅನುರಾಧಾ ಭಟ್ ಆಗಮಿಸಲಿದ್ದಾರೆ.

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು,ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ಮಾನ್ಯ ವಿಶೇಷ ಪ್ರತಿನಿಧಿ 2 ನವದೆಹಲಿ ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ ಮತ್ತು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಭರಮಣ್ಣ ಉಪ್ಪಾರ ಅವರುಗಳು ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ.

ರಾಜ್ಯ ಸಭೆ ಸಂಸದರಾದ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕ ಸಭಾ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ಜಿಲ್ಲಾ ಲೋಕ ಸಭಾ ಸಂಸದರಾದ ಜಗದೀಶ್ ಶೆಟ್ಟರ, ಉತ್ತರ ಕನ್ನಡ ಲೋಕ ಸಭಾ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜನಪ್ರತಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button