State

ಮಾಹಿತಿ ನೀಡಿದೆ ನಿರ್ಲಕ್ಷ್ಯ ವಹಿಸಿದ ಪಿಡಿಒ ಸೇರಿ ಗ್ರಾಪಂ ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ದಂಡ

ಕೊಪ್ಪಳ: ಸಕಾಲಕ್ಕೆ ಮಾಹಿತಿ ನೀಡಿದೆ ನಿರ್ಲಕ್ಷ್ಯ ವಹಿಸಿದ ಒಬ್ಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಮೂವರು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಅವರು ತಲಾ 10,000 ರೂ.ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಮೇಲ್ಮನವಿದಾರರು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದೆ ಇರುವುದರಿಂದ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಸಲ್ಲಿಸಿದ ದ್ವೀತಿಯ ಮೇಲ್ಮವಿ ವಿಚಾರಣೆ ನಡೆಸಿದಾಗ ಮೇಲ್ಮನವಿದಾರರಿಗೆ ಮಾಹಿತಿ ನೀಡುವಂತೆ ಪ್ರತಿವಾದಿಗಳಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಕಾರ್ಯದರ್ಶಗಳಿಗೆ ಪೀಠ ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 18(3) ಎ,ಡಿ ರಡಿ ನಿರ್ದೇಶನ ನೀಡಿದೆ.

ತಪ್ಪಿದಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005ರ ಕಲಂ 20(1) ರಡಿ ದಂಡದ ಎಚ್ಚರಿಕೆ ನೀಡಿದರೂ ಪೀಠದ ಆದೇಶ ಪಾಲನೆ ಮಾಡದ ಕಾರಣ ಪ್ರತಿವಾದಿ ಅಧಿಕಾರಿಗಳಾದ ವಡಗೇರಾ ತಾಲ್ಲೂಕಿನ ತಡಬಿಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಯಂಕನಗೌಡ, ಗುಂಡಗುರ್ತಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮಲ್ಲಿಕಾರ್ಜುನ ನಾಯಕ್, ಯಾದಗಿರಿ ತಾಲ್ಲೂಕಿನ ಸೈದಾಪೂರ ಗ್ರಾಮ ಪಂಚಾಯತ್ ಕಾರ್ಯದರ್ಶಿ ಇಸ್ಮಾಯಿಲ್ ಇವರಿಗೆ ಹಾಗೂ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ತಾಡರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ದೊಡ್ಡಮನಿ ಅವರಿಗೆ ತಲಾ 10,000 ರೂ. ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಮಾಡಲಾಗಿದೆ.

ಪ್ರಕರಣದಲ್ಲಿ ಸೈದಾಪೂರ ಗ್ರಾಮ ಪಂಚಾಯತ ಕಾರ್ಯದರ್ಶಿ ಇಸ್ಮಾಯಿಲ್ ಅವರಿಗೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲಾ 10,000 ರೂ. ಸೇರಿ 20,000 ರೂ. ದಂಡ ವಿಧಿಸಿದೆ ಹಾಗೂ ಮೇಲ್ಮನವಿದಾರಿಗೆ ಮಾಹಿತಿ ನೀಡಲು ಮಾಡಿದ ವಿಳಂಬಕ್ಕಾಗಿ ಮೇಲ್ಮನವಿದಾರರಿಗೆ 3000 ರೂ. ಸಾವಿರ ಪರಿಹಾರ ನೀಡುವಂತೆ ತಡಬಿಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಯಂಕನಗೌಡ ಇವರಿಗೆ ಆದೇಶ ಮಾಡಲಾಗಿದೆ.

ಒಟ್ಟು ಐದು ಪ್ರಕರಣಗಳಲ್ಲಿ ಪ್ರತಿವಾದಿಯವರಿಗೆ 50,000 ರೂ. ದಂಡ ವಿಧಿಸಿದ್ದು, ಸದರಿ ದಂಡ ಪಾವತಿ ಮಾಡಿ ಮುಂದಿನ ವಿಚಾರಣೆಗೆ ಹಾಜರಾಗಲು ಪುನಃ ಎಚ್ಚರಿಕೆ ನೀಡಿದೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button