Breaking NewsPolitics

ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: 3 ದಿನಗಳ ಬಳಿಕ ಡಿಸ್ಚಾರ್ಜ್: ಡಾ.ರವಿ ಪಾಟೀಲ್ ಮಾಹಿತಿ

ಬೆಳಗಾವಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯ ಡಾ.ರವಿ ಪಾಟೀಲ್ ತಿಳಿಸಿದ್ದಾರೆ.

ಸಚಿವೆ ಅಪಘಾತದಲ್ಲಿ ಗಾಯಗೊಮ್ಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯ ಡಾ.ರವಿ ಪಾಟೀಲ್ ಮಾಹಿತಿ ನೀಡಿದ್ದು, ಲಕ್ಷ್ಮೀ ಹೆಬ್ಬಳ್ಕರ್ ಅವರ ಬೆನ್ನುಹುರಿಗೆ ಪೆಟ್ಟು ಬಿದ್ದಿದೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ತಿಳಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ 10 ದಿನ ವಿಶ್ರಾಂತಿಯ ಅಗತ್ಯವಿದೆ. ಬೆಳಗಾವಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಯಲಿದೆ. ಮೂರು ದಿನಗಳ ಬಳಿಕ ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದರು.

ಚನ್ನರಾಜ ಹಟ್ಟಿಹೊಳಿ ಅವರಿಗೂ ಚಿಕಿತ್ಸೆ ಮುಂದುವರೆದಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಒಂದುವಾರ ವಿಶ್ರಾಂತಿಗೆ ಸೂಚಿಸಲಾಗಿದೆ ಎಂದರು. ಇನ್ನು ಸಚಿವರ ಗನ್ ಮ್ಯಾನ್ ಹಾಗೂ ಕಾರು ಚಾಲಕರಿಗೂ ಗಾಯಗಳಾಗಿತ್ತು, ಅವರಿಗೂ ಚಿಕಿತ್ಸೆ ನೀಡಿದ್ದೇವೆ ಎಂದು ತಿಳಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಇಬ್ಬರೂ ಟ್ರೀಟ್ ಮೆಂಟ್ ಗೆ ಸ್ಪಂದಿಸುತ್ತಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

Karmik Dhwani

Related Articles

Back to top button