CrimeLocal News

ಮಾನವೀಯತೆ ಮರೆತ ಪಾಪಿ ತಂದೆ: ಸ್ವಂತ ಮಗಳ ಮೇಲೆಯೇ ದೌರ್ಜನ್ಯ — ತಾಯಿಯೂ ಸಾಥ್, ಬಂಧನ

ಬೆಳಗಾವಿ: ಸಮಾಜ ತಲೆತಗ್ಗಿಸುವಂತ ಅಮಾನವೀಯ ಘಟನೆಯೊಂದು ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಕ್ಷಿಸಬೇಕಾದ ತಂದೆಯೇ ಭಕ್ಷಕನಾಗಿ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ.

ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಆರೋಪಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದಾನೆ ಎಂಬ ಮಾಹಿತಿ ಹೊರಬಂದಿದೆ.

ಈ ಪ್ರಕರಣದಲ್ಲಿ ಮತ್ತೊಂದು ಆಘಾತಕಾರಿ ಅಂಶವೆಂದರೆ, ಮಗಳನ್ನು ಕಾಪಾಡಬೇಕಾದ ತಾಯಿಯೇ ತನ್ನ ಗಂಡನ ಈ ಕೃತ್ಯಕ್ಕೆ ಪರೋಕ್ಷವಾಗಿ ಸಾಥ್ ನೀಡಿರುವುದು. ಇದರಿಂದ ಪ್ರಕರಣ ಇನ್ನಷ್ಟು ಗಂಭೀರತೆಯನ್ನು ಪಡೆದಿದೆ.

ಸಂತ್ರಸ್ತ ಬಾಲಕಿಯ ಸ್ಥಿತಿಯನ್ನು ಗಮನಿಸಿದ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಮಾರ್ಕೆಟ್ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶನಿವಾರ ಆರೋಪಿಯನ್ನು ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಿನ ತನಿಖೆ ಮುಂದುವರೆದಿದೆ.

ಈ ಅಮಾನವೀಯ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button