ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ : ಕೊನೆಗೂ ಜಂತರ್ ಮಂತರ್ ಪ್ರತಿಭಟನೆ ಅಂತ್ಯ

ಹೊಸದಿಲ್ಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (CJP) ಯು ಕಳೆದ ಹಲವು ದಿನಗಳಿಂದ ಜಂತರ್ ಮಂತರ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೊನೆಗೊಳಿಸಿದೆ.
ಸಭೆಯ ಬಳಿಕ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ಸಿಜೆಪಿ ವಕ್ತಾರರಾದ ಅಶುತೋಷ್ ರಂಕಾ ಮತ್ತು ಸೌರವ್ ಘೋಷ್, ಸರ್ಕಾರ ತಮ್ಮ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದ ಕಾರಣದಿಂದ ನಾವು ಜಂತರ್ ಮಂತರ್ ಪ್ರತಿಭಟನೆಯನ್ನು ಕೊನೆಗೊಳಿಸುತ್ತಿದ್ದೇವೆ ಎಂದಿದ್ದಾರೆ.
“ನಾವು ಸರ್ಕಾರಿ ನಿಯೋಗದೊಂದಿಗೆ ಮೂರು ಸುತ್ತಿನ ಚರ್ಚೆಗಳನ್ನು ನಡೆಸಿದ್ದೇವೆ. ಹಲವಾರು ದಿನಗಳಿಂದ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ನಮ್ಮ ಪ್ರತಿಭಟನೆಯು ಮೂರು ಪ್ರಮುಖ ಬೇಡಿಕೆಗಳನ್ನು ಹೊಂದಿತ್ತು: ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ, ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ದಾಖಲಾಗಿರುವ ಎಲ್ಲಾ ಕಾನೂನು ಪ್ರಕರಣಗಳು, ಆ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಮತ್ತು ಪ್ರತಿಭಟನಾಕಾರರು ಅಥವಾ ಸಂಘಟಕರ ವಿರುದ್ಧ ಭವಿಷ್ಯದಲ್ಲಿ ಯಾವುದೇ ಪ್ರಕರಣಗಳನ್ನು ದಾಖಲಿಸಬಾರದು.
ಮತ್ತು ನಮ್ಮ ಮೂರನೇ ಬೇಡಿಕೆ ನೀಟ್ ಪತ್ರಿಕೆ ನಡೆಯದ ಕಾರಣ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರವಾಗಿತ್ತು. ಸ್ವಲ್ಪ ಸಮಯದ ಹಿಂದೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದರು. ಇದರರ್ಥ ನಮ್ಮ ಮೊದಲ ಬೇಡಿಕೆ ಈಡೇರಿದೆ” ಎಂದು ಕಾಕ್ರೋಚ್ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಹೇಳಿದರು.
ಸರ್ಕಾರ ಎರಡನೇ ಬೇಡಿಕೆಗೂ ಒಪ್ಪಿಕೊಂಡಿದೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್‌ಗಳನ್ನು ಹಿಂಪಡೆಯಲಾಗುವುದು ಎಂದು ಕಾಕ್ರೋಚ್ ಜನತಾ ಪಕ್ಷ ಹೇಳಿದೆ. ದೇಶಾದ್ಯಂತ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಕೇಸ್ ಗಳನ್ನು ರದ್ದು ಮಾಡಲಾಗುತ್ತದೆ ಎಂದು ನಡ್ಡಾ ಹೇಳಿದರು. ಶಿಕ್ಷಣ ಸುಧಾರಣೆಗಳಿಗಾಗಿ ನೀವು ಸಲ್ಲಿಸಿರುವ ಬೇಡಿಕೆಗಳ ಪಟ್ಟಿಯನ್ನು ನಾವು ಅಧ್ಯಯನ ಮಾಡುತ್ತೇವೆ ಮತ್ತು ನಿಮ್ಮ ನಿಯೋಗದೊಂದಿಗೆ ಚರ್ಚೆ ನಡೆಸುತ್ತೇವೆ” ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಹೇಳಿದರು.
“ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿರುವುದರಿಂದ ಎಲ್ಲಾ ಪ್ರತಿಭಟನಾಕಾರರು ಮನೆಗೆ ಹೋಗಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಸಿಜೆಪಿಯ ಸೌರವ್ ದಾಸ್ ಹೇಳಿದರು.


