
ಬೆಂಗಳೂರು: ಡಿ.ಕೆ. ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. 20 ಮಂದಿ ಶಾಸಕರಿಗೆ ಈ ಬಾರಿ ಮಂತ್ರಿ ಪಟ್ಟ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ, ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಅಂತಿಮ ಸಭೆ ನಡೆಸಿ ಪಟ್ಟಿಗೆ ಒಪ್ಪಿಗೆ ನೀಡಿದ್ದಾರೆ.
ಸ್ಫಿಕರ್ ಸ್ಥಾನಕ್ಕೆ ಟಿ.ಬಿ.ಜಯಚಂದ್ರ ಹೆಸರು ಅಂತಿಮಗೊಂಡಿದೆ. ಸ್ಪೀಕರ್ ರೇಸ್‌ನಲ್ಲಿ ಆರ್‌ವಿ ದೇಶಪಾಂಡೆ, ದಿನೇಶ್ ಗುಂಡೂರಾವ್ ಹೆಸರು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಹೈಕಮಾಂಡ್ ನಾಯಕರು ಟಿ.ಬಿ.ಜಯಚಂದ್ರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
ಪಟ್ಟಿಯಲ್ಲಿ ಯಾರಿದ್ದಾರೆ? ಚೆಲುವರಾಯಸ್ವಾಮಿ, ಹೆಚ್ ಸಿ ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ಲಕ್ಷ್ಮಣ ಸವದಿ, ಗಾಯಿತ್ರಿ ಶಾಂತೇಗೌಡ, ಮಧು ಬಂಗಾರಪ್ಪ, ಅಜಯ್ ಸಿಂಗ್, ಶಿವರಾಜ್ ತಂಗಡಗಿ ರುದ್ರಪ್ಪ ಲಮಾಣಿ, ರಘುಮೂರ್ತಿ, ರಿಜ್ವಾನ್ ಅರ್ಷದ್, ಶಿವಲಿಂಗೇಗೌಡ, ಪುಟ್ಟರಂಗಶೆಟ್ಟಿ, ಸಂತೋಷ್ ಲಾಡ್, ನರೇಂದ್ರ ಸ್ವಾಮಿ, ಮಂಕಾಳ ವೈದ್ಯ, ವಿಜಯನಾಂದ ಕಾಶಪ್ಪನವರ್, ಬಿ ನಾಗೇಂದ್ರ, ಬಸವರಾಜ್ ರಾಯರೆಡ್ಡಿ, ಕೆಎಸ್ ಬಸವಂತಪ್ಪ ಎಂಬುವರಿಗೆ ಹೈಕಮಾಂಡ್ ಮಣೆ ಹಾಕಿದೆ.



