Local News

ಬೆಳಗಾವಿ ಚಳಿಗಾಲ ಅಧಿವೇಶನ-2026 ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಬೆಳಗಾವಿ ಚಳಿಗಾಲ ಅಧಿವೇಶನ-2026

ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಬೆಳಗಾವಿ, ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ (ಅ.22) ಜರುಗಿದ ಚಳಿಗಾಲ ಅಧಿವೇಶನ-2026 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.

ಅಧಿವೇಶನದ ಯಶಸ್ವಿಗಾಗಿ ಉಪ ಸಮಿತಿಗಳನ್ನು ರಚಿಸಲಾಗುವುದು. ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು.
ಅಧಿವೇಶನಕ್ಕೆ ಆಗಮಿಸುವ ಸಚಿವರು, ಗಣ್ಯರುಗಳಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು.

ಅಧಿವೇಶನಕ್ಕಾಗಿ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರುಗಳಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾವಹಿಸಬೇಕು.
ಅಧಿವೇಶನಕ್ಕೆ ಆಗಮಿಸುವ ಗಣ್ಯರುಗಳಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸಬೇಕು.‌ ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ವಸತಿಗಾಗಿ ಗುರುತಿಸಲಾಗುವ ಹೊಟೇಲ್ ಗಳ ಮಾಲಿಕರೊಂದಿಗೆ ಚರ್ಚಿಸಿ ಕೊಠಡಿಗಳನ್ನು ಕಾಯ್ದಿರಿಸಲು ತಿಳಿಸಿದರು.

ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗಬಾರದು.
ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಸಿಬ್ಬಂದಿಗಳ ವಸತಿ‌ ಪ್ರದೇಶಗಳಲ್ಲಿ ತುರ್ತು ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು.

ಒಟ್ಟಾರೆಯಾಗಿ ಪ್ರಸಕ್ತ ಸಾಲಿನ‌ ಚಳಿಗಾಲದ‌ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ‌ ನೀಡಬಾರದು. ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ತಮ್ಮ‌ ಜವಾಬ್ದಾರಿಗಳನ್ನು ಅರಿತು ಅಧಿವೇಶನ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.

ಸಭೆಯಲ್ಲಿ ಪೋಲಿಸ್ ಆಯುಕ್ತರಾದ ಪ್ರಕಾಶ ನಿಕಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಮರಾಜನ್. ಕೆ, ಪ್ರಶಿಕ್ಷಣಾರ್ಥಿ ಆಯ.ಎ.ಎಸ್. ಅಧಿಕಾರಿ ರೋಹಿತ್ ಸಿಂಗ್, ಅಪರ‌ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button