Breaking NewsPolitics
Trending

ಬೆಳಗಾವಿಯಲ್ಲಿ ಐಟಿ ಪಾರ್ಕ್: ಸ್ಥಳ ಪರಿಶೀಲನೆ

 ಬೆಳಗಾವಿ: ಬೆಳಗಾವಿ ನಗರದ ಅಭಿವೃದ್ಧಿಗೆ ಹೊಸ ವೇಗ ನೀಡುವ ಉದ್ದೇಶದಿಂದ ಪ್ರಸ್ತಾವಿತ ಐಟಿ ಪಾರ್ಕ್ ನಿರ್ಮಾಣ ಯೋಜನೆಗೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಹಾಗೂ ಬುಡಾ ಅಧ್ಯಕ್ಷ ಆಸಿಫ್ (ರಾಜು) ಸೇಠ್ ಚುರುಕು ನೀಡಿದ್ದಾರೆ.

ಪುತ್ರ ಅಮಾನ್ ಸೇಠ್ ಹಾಗೂ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧಿಕಾರಿಗಳೊಂದಿಗೆ ಪ್ರಸ್ತಾವಿತ ಐಟಿ ಪಾರ್ಕ್ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿದ ಅವರು, ಜಮೀನಿನ ಸಮೀಕ್ಷೆ ನಡೆಸಿ ಯೋಜನೆಯ ಪ್ರಗತಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು.

ಈ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಆಸಿಫ್ ಸೇಠ್, ಯೋಜನೆಗೆ ಅಗತ್ಯವಿರುವ ಪ್ರಕ್ರಿಯೆಗಳನ್ನು ನಿಯಮಾನುಸಾರ ಪೂರ್ಣಗೊಳಿಸುವಂತೆ ಸೂಚಿಸಿದರು. ಯೋಜನೆಯ ಅನುಷ್ಠಾನದಲ್ಲಿ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿಯೊಂದು ಹಂತದಲ್ಲೂ ಪಾರದರ್ಶಕತೆ ಕಾಯ್ದುಕೊಂಡು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.

ಪ್ರಸ್ತಾವಿತ ಐಟಿ ಪಾರ್ಕ್ ಬೆಳಗಾವಿ ನಗರದ ಭವಿಷ್ಯದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಶಾಸಕ ಆಸಿಫ್ ಸೇಠ್ ಅಭಿಪ್ರಾಯಪಟ್ಟರು. ಐಟಿ ಪಾರ್ಕ್ ನಿರ್ಮಾಣದಿಂದ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚಲಿದ್ದು, ನಗರದ ಆರ್ಥಿಕ ಬೆಳವಣಿಗೆಗೂ ಉತ್ತೇಜನ ದೊರೆಯಲಿದೆ ಎಂದು ತಿಳಿಸಿದರು.

ಬುಡಾ ಅಧ್ಯಕ್ಷರಾಗಿ ಹಾಗೂ ಶಾಸಕನಾಗಿ ನಗರದ ದೀರ್ಘಕಾಲೀನ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಯೋಜನೆಯ ಯಾವುದೇ ಹಂತದಲ್ಲಿ ಅಕ್ರಮಗಳು ಅಥವಾ ಲೋಪದೋಷಗಳಿಗೆ ಅವಕಾಶ ನೀಡುವುದಿಲ್ಲ. ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿ, ಅಗತ್ಯ ಪ್ರಕ್ರಿಯೆಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸುವ ಮೂಲಕ ಯೋಜನೆಯನ್ನು ವ್ಯವಸ್ಥಿತವಾಗಿ ಮುಂದುವರಿಸಬೇಕು ಎಂದು ಆಸಿಫ್ ಸೇಠ್ ಸೂಚಿಸಿದರು.

ಐಟಿ ಪಾರ್ಕ್ ಯೋಜನೆ ಕಾರ್ಯರೂಪಕ್ಕೆ ಬಂದರೆ ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಹೊಸ ಅವಕಾಶಗಳು ತೆರೆದುಕೊಳ್ಳುವ ನಿರೀಕ್ಷೆಯಿದೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button