State
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನವೆಂಬರ್ 30 ರಿಂದ ಡಿಸೆಂಬರ್11 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಇಂದು ನಡೆದ ಸಚಿವ ಸಂಪುಟದಲ್ಲಿ ನಿರ್ಧಾರವಾಗಿದೆ.
ಈ ಮೊದಲು ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7, 2026 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿತ್ತು. ಆದರೆ ಇಂದು ನಡೆದ ಸಚಿವ ಸಂಪುಟದಲ್ಲಿ ಚಳಿಗಾಲ ಅಧಿವೇಶನ ನಡೆಸುವ ಕುರಿತು ಅಂತಿಮ ದಿನಾಂಕ ಪ್ರಕಟಿಸಲಾಗಿದೆ. ಈ ಅಧಿವೇಶನಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಎದುರಿಸುತ್ತಿರುವ ಬರ, ನೀರಾವರಿ, ಕೃಷಿ, ಉದ್ಯೋಗ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ರಸ್ತೆ ಸಂಪರ್ಕ, ಕುಡಿಯುವ ನೀರು ಸೇರಿದಂತೆ ವಿವಿಧ ಸಮಸ್ಯೆಗಳು ಅಧಿವೇಶನದಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.



