Local NewsPolitics
Trending

ಗಡಿನಾಡು ಬೆಳಗಾವಿಯಲ್ಲಿ ಕನ್ನಡಾಭಿಮಾನದ ಸಂಭ್ರಮ; ರಾಜ್ಯೋತ್ಸವಕ್ಕೆ ಅದ್ದೂರಿ ಚಾಲನೆ!

ಗಡಿನಾಡು ಬೆಳಗಾವಿಯಲ್ಲಿ ಕನ್ನಡಾಭಿಮಾನದ ಸಂಭ್ರಮ; ರಾಜ್ಯೋತ್ಸವಕ್ಕೆ ಅದ್ದೂರಿ ಚಾಲನೆ! 💛❤️
ಗಡಿನಾಡು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 71ನೇ ಕನ್ನಡ ರಾಜ್ಯೋತ್ಸವದ ಅದ್ದೂರಿ ಸಮಾರಂಭದಲ್ಲಿ ಭಾಗವಹಿಸಿ, ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿ, ತಾಯಿ ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದೆ.
ನಂತರ ಪೊಲೀಸ್ ಇಲಾಖೆ, ವಿವಿಧ ಭದ್ರತಾ ಪಡೆಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಪಥಸಂಚಲನವನ್ನು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದೆ. ಶಿಸ್ತುಬದ್ಧ ಪಥಸಂಚಲನ, ಬ್ಯಾಂಡ್ ವಾದನ ಹಾಗೂ ವಿದ್ಯಾರ್ಥಿಗಳ ಪ್ರದರ್ಶನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.
ಈ ಸಂದರ್ಭದಲ್ಲಿ ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ; ಅದು ನಮ್ಮ ಅಸ್ಮಿತೆ, ಇತಿಹಾಸ, ಸಂಸ್ಕೃತಿ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ. ಗಡಿನಾಡು ಬೆಳಗಾವಿಯಲ್ಲಿ ಕನ್ನಡದ ನೆಲ, ಜಲ, ಭಾಷೆ ಹಾಗೂ ಸಂಸ್ಕೃತಿಯ ರಕ್ಷಣೆಗೆ ನಾವೆಲ್ಲರೂ ಬದ್ಧರಾಗಿರಬೇಕು. ಕನ್ನಡಿಗರ ಹೋರಾಟ, ತ್ಯಾಗ ಮತ್ತು ಒಗ್ಗಟ್ಟಿನ ಫಲವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಗಿದೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗೂ ಕನ್ನಡದ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ಕೆಲಸವಾಗಬೇಕು ಎಂದು ಕರೆ ನೀಡಿದೆ.
ಇದೇ ಸಂದರ್ಭದಲ್ಲಿ ಶಿಕ್ಷಣ, ಸಾಹಿತ್ಯ, ಕಲೆ, ಸಂಸ್ಕೃತಿ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸಮಾಜಕ್ಕೆ ತಮ್ಮ ಅಮೂಲ್ಯ ಕೊಡುಗೆ ನೀಡಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ನಗರದೆಲ್ಲೆಡೆ ಕನ್ನಡದ ಬಾವುಟಗಳು ರಾರಾಜಿಸುತ್ತಿದ್ದು, ಕನ್ನಡಾಭಿಮಾನಿಗಳ ಸಂಭ್ರಮ, ಕನ್ನಡಪರ ಘೋಷಣೆಗಳು ಹಾಗೂ ಕೆಂಪು-ಹಳದಿ ಬಣ್ಣದ ಸಡಗರ ಗಡಿನಾಡಿನ ಕನ್ನಡ ಪ್ರೇಮವನ್ನು ಮತ್ತೊಮ್ಮೆ ಅನಾವರಣಗೊಳಿಸಿವೆ.
ಈ ಸಂದರ್ಭದಲ್ಲಿ ಶಾಸಕ ಶ್ರೀ ಆಸಿಫ್ (ರಾಜು) ಸೇಠ್, ಜಿಲ್ಲಾಧಿಕಾರಿ ಶ್ರೀ ಮೊಹಮ್ಮದ್ ರೋಷನ್, ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಶ್ರೀ ಸಂದೀಪ್ ಪಾಟೀಲ, ನಗರ ಪೊಲೀಸ್ ಆಯುಕ್ತ ಶ್ರೀ ನಿಕ್ಕಂ ಪ್ರಕಾಶ್ ಅಮೃತ್, ಪ್ರಾದೇಶಿಕ ಆಯುಕ್ತೆ ಶ್ರೀಮತಿ ಕೆ.ಎಂ. ಜಾನಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಕೆ. ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಾಹುಲ್ ಶಿಂಧೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ! ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ! 💛❤️
Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button