Local NewsState
Trending

ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಏಜೆಂಟರು ಹಾಗೂ ಮಧ್ಯವರ್ತಿಗಳ ಹಾವಳಿ ತಡೆಗೆ ಮಹತ್ವದ ಸಭೆ

ಬೆಳಗಾವಿ: ಮಹಾನಗರ ಪಾಲಿಕೆಯ ವಲಯ ಕಚೇರಿಗಳಲ್ಲಿ ಏಜೆಂಟರು ಹಾಗೂ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಮೈಲುಗೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೌಸಿಫ್ ಎಂ. ಮುಲ್ಲಾ: ಪತ್ರಿಕೋದ್ಯಮ, ಮಾನವ ಹಕ್ಕುಗಳ ರಕ್ಷಣೆ ಮತ್ತು ರೈತಪರ ಹೋರಾಟದ ಮೂಲಕ ಜನಸೇವೆಯ ಪಯಣ

ಮಂಗಳವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಿತಿ ಸದಸ್ಯರು, ನಗರಸೇವಕರು ಹಾಗೂ ಸಾರ್ವಜನಿಕರಿಂದ ಈ ಕುರಿತು ದೂರುಗಳು ಬಂದಿವೆ. ಹೀಗಾಗಿ, ಮಧ್ಯವರ್ತಿಗಳ ಸಹಾಯವಿಲ್ಲದೆ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಬರುವ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ತ್ವರಿತವಾಗಿ ಮಾಡಿಕೊಡಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತಾಕೀತು ಮಾಡಿದರು.

ಸಭೆಯಲ್ಲಿ ಉಪಮೇಯರ್ ಹನುಮಂತ ಕೊಂಗಾಲಿ ಅವರು ಅಶೋಕನಗರದ ಬ್ಯಾಡ್ಮಿಂಟನ್ ಕೋರ್ಟ್ ಕಟ್ಟಡದ ವಾರ್ಷಿಕ ನಿರ್ವಹಣಾ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಬಾಕಿ ಮೊತ್ತವನ್ನು ಬಡ್ಡಿ ಸಮೇತ ವಸೂಲಿ ಮಾಡುವುದು ಹಾಗೂ ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚಿಸಿದರು.

ತೌಸಿಫ್ ಎಂ. ಮುಲ್ಲಾ: ಪತ್ರಿಕೋದ್ಯಮ, ಮಾನವ ಹಕ್ಕುಗಳ ರಕ್ಷಣೆ ಮತ್ತು ರೈತಪರ ಹೋರಾಟದ ಮೂಲಕ ಜನಸೇವೆಯ ಪಯಣ

ಸಮಿತಿ ಸದಸ್ಯ ಬ್ರಹ್ಮಾನಂದ ಮಿರಜಕರ್ ಅವರು ಬಾಪಟಗಲ್ಲಿಯ ಕಾರು ಪಾರ್ಕಿಂಗ್ ಗುತ್ತಿಗೆ ಅವಧಿ ಮುಗಿದ ಬಳಿಕ ಕೈಗೊಂಡ ಕ್ರಮಗಳ ಕುರಿತು ಪ್ರಶ್ನಿಸಿದರು. ಅಧಿಕಾರಿಗಳು ನೀಡಿದ ಮಾಹಿತಿಯಿಂದ ಅತೃಪ್ತಿ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ನಾಯಕ ಸಂತೋಷ್ ಪೇಡ್ನೇಕರ ಮಧ್ಯಪ್ರವೇಶಿಸಿ, ಈ ಕುರಿತು ಸಮಗ್ರ ಮಾಹಿತಿ ಹಾಗೂ ಸಂಬಂಧಿಸಿದ ಸಿಬ್ಬಂದಿಯೊಂದಿಗೆ ಮುಂದಿನ ಸಭೆಗೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಆನ್‌ಲೈನ್ ಆಸ್ತಿ ತೆರಿಗೆ ತಂತ್ರಾಂಶ ನಿರ್ವಹಿಸುತ್ತಿರುವ ಸಾಫ್ಟ್‌ವೇರ್ ಕಂಪನಿಯ ವಾರ್ಷಿಕ ನಿರ್ವಹಣಾ ಅವಧಿ ವಿಸ್ತರಣೆ, ಇ-ಆಸ್ತಿ ಕಡತಗಳ ಅನುಮೋದನೆ ವಿಳಂಬ, ಸಹ್ಯಾದ್ರಿ ನಗರದ ಸಾರ್ವಜನಿಕ ಉದ್ಯಾನವನಕ್ಕೆ ‘ವೀರ ಸಾವರ್ಕರ್ ಉದ್ಯಾನವನ’ ಎಂದು ನಾಮಕರಣ ಮಾಡುವ ಪ್ರಸ್ತಾವನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಕೆಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇನ್ನುಳಿದವುಗಳನ್ನು ಮುಂದಿನ ಸಭೆಯಲ್ಲಿ ಮಂಡಿಸುವಂತೆ ಸೂಚಿಸಲಾಯಿತು.

ತೌಸಿಫ್ ಎಂ. ಮುಲ್ಲಾ: ಪತ್ರಿಕೋದ್ಯಮ, ಮಾನವ ಹಕ್ಕುಗಳ ರಕ್ಷಣೆ ಮತ್ತು ರೈತಪರ ಹೋರಾಟದ ಮೂಲಕ ಜನಸೇವೆಯ ಪಯಣ

ಮೇಯರ್ ಪ್ರೀತಿ ಕಾಮಕರ್ ಮಾತನಾಡಿ, ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುದಾನದ ಅಗತ್ಯವಿದೆ. ಹೀಗಾಗಿ ಆಸ್ತಿ ತೆರಿಗೆ ವಸೂಲಿಗೆ ಹೆಚ್ಚಿನ ಆದ್ಯತೆ ನೀಡಿ, ಪಾಲಿಕೆಯ ಕಂದಾಯ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಶಂಕರ ಪಾಟೀಲ, ರವಿರಾಜ್ ಸಂಬ್ರೇಕರ್, ದೀಪಾಲಿ ಟೋಪಗಿ, ಮೋದಿನಸಾಬ್ ಮತವಾಲೆ, ಬಸವರಾಜ ಮೋದಗೆಕರ, ನಗರಸೇವಕರು, ಕಂದಾಯ ಶಾಖೆಯ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ, ಆಡಳಿತ ಶಾಖೆಯ ಉಪ ಆಯುಕ್ತ ಉದಯಕುಮಾರ ಬಿ.ಟಿ., ಪರಿಷತ್ ಕಾರ್ಯದರ್ಶಿ ರಮೇಶ ಬಡಿಗೇರ ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button