State
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಆಯ್ಕೆ

ಬೆಳಗಾವಿ: ಕಳೆದ ವರ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಂಕಾ ಸಂಸದೆ ಆಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು, ಈಗ ಸತೀಶ್ ಪುತ್ರ ಕೂಡ ರಾಜ್ಯ ರಾಜಕಾರಣಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ.
ಇತ್ತೀಚೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಆನ್ ಲೈನ್ ಮೂಲಕ ನಡೆದ ಚುನಾವಣೆಯಲ್ಲಿ 1,20,000 ಕ್ಕಿಂತ ಅಧಿಕ ಮತಗಳನ್ನು ಪಡೆದು ರಾಹುಲ್ ಜಾರಕಿಹೊಳಿ ಆಯ್ಕೆ ಆಗಿದ್ದಾರೆ.


