Local News
SANTHOSH LAD: ಸಚಿವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತ
ಬೈಕಿನಿಂದ ಬಿದ್ದು ನರಳಾಡುತ್ತಿದ್ದ ಸವಾರನ ನೆರವಿಗೆ ಬಂದ ಸಚಿವ ಸಂತೋಷ್ ಲಾಡ್

ಬಾಗಲಕೋಟೆ: ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಯುವಕನ ನೆರವಿಗೆ ಬರುವ ಮೂಲಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದು ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ ಬೈಕ್ ಸವಾರನೊಬ್ಬ ಆಯತಪ್ಪಿ ಬಿದ್ದಿದ್ದರು. ಘಟನೆಯಿಂದ ಗಾಯಗೊಂಡಿದ್ದ ಸವಾರ ಸತೀಶ್ ರಸ್ತೆಯಲ್ಲೇ ನರಳಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಸಚಿವರು ಬರುತ್ತಿದ್ದರು.
ಗಾಯಾಳು ನರಳಾಡುತ್ತಿರುವುದನ್ನು ಗಮನಿಸಿದ ಸಚಿವರು ಕೂಡಲೇ ಕಾರಿನಿಂದ ಇಳಿದು ಆತನನ್ನು ಕೈಯಲ್ಲಿ ಹಿಡಿದುಕೊಂಡು ಬಂದು ತಮ್ಮ ಕಾರಿನಲ್ಲೇ ಲೋಕಾಪುರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ.
ಸದ್ಯ ಸಚಿವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.


