Politics
Trending
ಬಿಜೆಪಿಯವರಿಗೆ ಕೈ ಮುಗಿದು ಕೇಳುವೆ, ದೇಶದ ಮಹಾರಾಜ ಎನಿಸಿಕೊಳ್ಳುವ ಪ್ರಧಾನಿ ಮೋದಿ ಅವರನ್ನು ಬದಲು ಮಾಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್

ಹಾಸನ: ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ, 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ, ಆದರೆ ಏನು ಕೆಲಸ ಮಾಡ್ತಾರೆ ಅನ್ನೋದು ಜನರಿಗೆ ಗೊತ್ತಾಗುತ್ತಿಲ್ಲ, ಹಾಗಾಗಿ ಬಿಜೆಪಿಯವರಿಗೆ ಕೈ ಮುಗಿದು ಕೇಳುವೆ, ದೇಶದ ಮಹಾರಾಜ ಎನಿಸಿಕೊಳ್ಳುವ ಪ್ರಧಾನಿ ಮೋದಿ ಅವರನ್ನು ಬದಲು ಮಾಡಿ, ಇದೇ ದೇಶಕ್ಕೆ ಸಿಗುವ ಪರಿಹಾರ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೋದಿ ಬಗ್ಗೆ ಲೇವಡಿ ಮಾಡಿದರು.
ಹಾಸನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ದೇಶ ಯಾವ ಪಕ್ಷದ ಸ್ವತ್ತಲ್ಲ. ಬಿಜೆಪಿ ಅಥವಾ ಕಾಂಗ್ರೆಸ್ಗೆ ಈ ದೇಶವನ್ನು ಒಪ್ಪಿಸಲು ಸಾಧ್ಯವಿಲ್ಲ. ಬಿಜೆಪಿಯವರಿಗೆ ಕೈ ಮುಗಿದು ಕೇಳುತ್ತೇನೆ. ಮೊದಲು ನಿಮ್ಮ ಮಹಾರಾಜನಾಗಿರುವ ದೇಶದ ಪ್ರಧಾನಿಯನ್ನು ಬದಲಾಯಿಸಿ. ಇದರಿಂದ ದೇಶದಕ್ಕೆ ಪರಿಹಾರ ಸಿಗುತ್ತದೆ ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು



