Local News

ಫಲಾನುಭವಿಗಳ ಮೂರು ತಿಂಗಳ ಗೃಹಲಕ್ಷ್ಮಿ ಹಣ ಯಾವಾಗ ಜಮಾ? ಇಲ್ಲಿದೆ ಮಾಹಿತಿ

ಬೆಂಗಳೂರು,ಫೆಬ್ರವರಿ 12: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಮಹಿಳಾ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದಿರುವ ಯೋಜನೆಯೇ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯ ಮಹಿಳೆಯವರಿಗೆ ಸಾಕಷ್ಟು ಉಪಯೋಗವಾಗಿದೆ.

ಆರಂಭದಿಂದ ಇಲ್ಲಿಯವರೆಗೂ ಹಲವು ಸಮಸ್ಯೆಗಳ ನಡುವೆ ಗೃಹ ಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ.

ಆದರೆ, ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆ ಹಣ ಜಮಾ ಆಗದ ಹಿನ್ನೆಲೆ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಪೆಂಡಿಂಗ್‌ ಇರುವ ಮೂರು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆ ಹಣ ಜಮಾ ಆಗಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, 15ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ ಬಂದಿಲ್ಲ. ಹಾಗೂ 16 ಹಾಗೂ 17 ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಎಂದು ಮಹಿಳೆಯರು ಕಾದುಕುಳಿತಿದೆ. ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಜಮೆ ಆಗುತ್ತದೆ ಎಂದು ತಿಳಿದು ಬಂದಿದೆ. ಈ ತಿಂಗಳ ಕೊನೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯ 15 ಹಾಗೂ 16 ನೇ ಕಂತಿನ ಹಣ ಜಮಾ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಪೆಂಡಿಂಗ್ ಇರುವ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ, ಈಗಾಗಲೇ ಬಿಡುಗಡೆ ಕಾರ್ಯ ಶುರುವಾಗಿದ್ದು ಈ ವಾರದ ಕೊನೆಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆ ತಲುಪಲಿದೆ ಎಂದು ಮೂಲಗಳು ತಿಳಿಸಿವೆ. ಎಲ್ಲಾ ಹಣವನ್ನು ಹಾಗೂ ಎಲ್ಲಾ ಜಿಲ್ಲೆಗಳಿಗೆ ಒಟ್ಟಾರೆ ಬಿಡುಗಡೆ ಮಾಡಲು ಸಾಧ್ಯವಿಲ್ಲದ ಕಾರಣ, ಹಂತ ಹಂತವಾಗಿ ಹಣ ಬಿಡುಗಡೆ ಆಗಲಿದೆ. ಜೊತೆಗೆ ಹಣ ವರ್ಗಾವಣೆಗೆ ಇನ್ನಷ್ಟು ಸುಲಭ ಪ್ರಕ್ರಿಯೆ ಕೈಗೊಳ್ಳುವ ಸಲುವಾಗಿ ತಡವಾಗಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಕೆಲ ಜಿಲ್ಲೆಗಳಲ್ಲಿ 15 ನೇ ಕಂತಿನ ಹಣ ಬಿಡುಗಡೆಯಾಗಿಲ್ಲ. ಯಾವಾಗ 15 ನೇ ಕಂತಿನ ಹಣ ಬಿಡುಗಡೆಯಾಗಲಿದೆ ಎಂದು ಮಹಿಳೆಯರು ಕಾದು ಕುಳಿತಿದ್ದಾರೆ. ಈ ತಿಂಗಳ 15ರಂದು ಹಣ ಬ್ಯಾಂಕ್ ಖಾತೆ ತಲುಪುವ ನಿರೀಕ್ಷೆ ಇದೆ. ಈ ತಿಂಗಳ 20ರೊಳಗೆ ಎಲ್ಲ ಜಿಲ್ಲೆಗಳಿಗೆ ಪೂರ್ಣಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ 15 ಕಂತಿನ ಹಣ ಜಮಾ ಆಗಿದೆ. ಕೆಲ ಜಿಲ್ಲೆಗಳಲ್ಲಿ ಮಾತ್ರ 15 ಕಂತಿನ ಹಣ ಬಿಡುಗಡೆಯಾಗಿಲ್ಲ. ಇತ್ತ ಲಕ್ಷ್ಮಿ ಯೋಜನೆಯ ಹಣ ಪಾವತಿ ವಿಧಾನದಲ್ಲಿ ಬದಲಾವಣೆ ಮಾಡಲು ಸರ್ಕಾರ ತಯಾರಿ ನಡೆಸುತ್ತಿದೆ. ಫಲಾನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆಯಾಗುವ ಬದಲು, ತಾಲೂಕು ಪಂಚಾಯತ್ ಮೂಲಕ ಹಣ ವಿತರಿಸುವ ಸಾಧ್ಯತೆ ಇದೆ. ಇನ್ನೂ ಈ ಬದಲಾವಣೆಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿನ ಹೊರೆ ಕಡಿಮೆಯಾಗಲಿದೆ.

ಈಗಾಗಲೇ ಮೂರು ತಿಂಗಳಿನಿಂದ ಹಣ ಲಭ್ಯವಾಗದ ಕಾರಣ, ಮಹಿಳೆಯರು ಸರ್ಕಾರದ ಈ ಹೊಸ ನಿರ್ಧಾರದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಯೋಜನೆಯ ಹಣವನ್ನು ರಾಜ್ಯ ಕಾರ್ಯದರ್ಶಿಯ ಮೂಲಕ ಸ್ಥಳೀಯ ತಾಲ್ಲೂಕು ಪಂಚಾಯಿತಿಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಇದರಿಂದ, ಜವಾಬ್ದಾರಿಯ ಹಂಚಿಕೆ ಹೆಚ್ಚು ಸಮರ್ಥವಾಗಬಹುದು, ಆದರೆ ಭ್ರಷ್ಟಾಚಾರದ ಅನುಮಾನವೂ ವ್ಯಕ್ತವಾಗಿದೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button