Crime
LOKAYUKTA RAID : ರೆಡ್‌ಹ್ಯಾಂಡ್ ಆಗಿ 5000 ಲಂಚಕ್ಕೆ ಕೈಚಾಚಿ ಲೋಕಾಯುಕ್ತ ಬಲೆಗೆ ಬಿದ್ದ ಗಾ.ಪಂ ಅಧ್ಯಕ್ಷ!

ಕಲಬುರಗಿ : ಲಂಚ ಸ್ವೀಕರಿಸುವ ವೇಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ರೆಡ್‌ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿದ್ದಾರೆ
ಕಲಬುರಗಿಯ ಕಾಳಗಿ ತಾಲ್ಲೂಕಿನ ರಾಜಪುರ್ ಗ್ರಾಮ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ರೆಡ್ಡಿ 5000 ಸಾವಿರ ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದಿದ್ದಾರೆ
ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೇ ನಂಬರ್ 4- ರಲ್ಲಿ ಡಿಸಿಬಿ ತೆರಿಗೆ ಹೆಸರನ್ನು ನೋಂದಾಯಿಸಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ರೆಡ್ಡಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ್ ದೂರು ನೀಡಿದ್ದರು. ದೂರಿನನ್ವಯ ದಿಢೀರ್ ದಾಳಿ ನಡೆಸಿ ಪ್ರಕಾಶ್‌ರೆಡ್ಡಿಯನ್ನು ಲೋಕಾ ಪೊಲೀಸರು ಬಲೆಗೆ ಕೆಡವಿದ್ದಾರೆ


