Crime
ಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣ : 24 ಗಂಟೆಯಲ್ಲೇ ಆರೋಪಿಗಳ ಬಂಧನ

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣ ದಾಖಲಾದ 24 ಗಂಟೆಯ ಒಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪಹರಣ ಮಾಡಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, ಕಿಡ್ನಾಪ್ ಪ್ರಕರಣ ಸುಖಾಂತ್ಯವಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, “ಮೂಡಲಗಿ ತಾಲ್ಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ್ ಅಂಬಿ ಅವರನ್ನು ಕಿಡ್ನಾಪ್ ಮಾಡಲಾಗಿತ್ತು. ಅವರ ಪತ್ತೆಗಾಗಿ ಘಟಪ್ರಭಾ ಪೊಲೀಸರು ಹಾಗೂ ನಿಪ್ಪಾಣಿ ಪೊಲೀಸರನ್ನೊಳಗೊಂಡ ತಂಡ ರಚಿಸಲಾಗಿತ್ತು. ನಮ್ಮ ಪೊಲೀಸರ ತಂಡ ದಾಳಿ ನಡೆಸಿ ವ್ಯಕ್ತಿಯನ್ನು ರಕ್ಷಣೆ ಮಾಡಿದೆ. ಹಾಗೂ ಆರೋಪಿಗಳನ್ನು ಬಂಧಿಸಿದೆ” ಎಂದರು.ಆರೋಪಿಗಳಾದ ಈಶ್ವರ ರಾಮಗಾನಟ್ಟಿ, ಸಚಿನ್ ಕಾಂಬಳೆ, ರಮೇಶ್ ಕಾಂಬಳೆ, ರಾಘವೇಂದ್ರ ಮಾರಾಪುರನನ್ನು ಬಂಧಿಸಿದ್ದೇವೆ. ಪ್ರಕರಣದಲ್ಲಿ ಇನ್ನೂ ಕೆಲವು ಜನ ಭಾಗಿಯಾಗಿದ್ದಾರೆ ಎನ್ನುವ ಸಂದೇಹವಿದೆ. ಅವರನ್ನೂ ಸಹ ವಶಕ್ಕೆ ಪಡೆದು ಅವರ ಮೇಲೆ ಕಾನೂನು ಕ್ರಮ ಜರುಗಿಸುತ್ತೇವೆ” ಎಂದರು.


